ರಾಯಚೂರು: ‘ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ವಿಶೇಷ ತೀವ್ರ ಪರಿಷ್ಕರಣೆಯ ಮೂರನೇ ಹಂತದ ಪ್ರಕ್ರಿಯೆಯು ಜೂನ್ 20ರಿಂದ ಆರಂಭವಾಗಿ ಅಕ್ಟೋಬರ್ 7ಕ್ಕೆ ಮುಕ್ತಾಯವಾಗಲಿದೆ’ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಪೂವಿತಾ ಎಸ್. ತಿಳಿಸಿದರು.

ಇಲ್ಲಿಯ ಜಿಲ್ಲಾಡಳಿತ ಕಚೇರಿಯ ಸಭಾಂಗಣದಲ್ಲಿ ನಡೆದ ಮತದಾರರ ವಿಶೇಷ ತೀವ್ರ ಪರಿಷ್ಕರಣೆ-2026ರ (ಎಸ್.ಐ.ಆರ್) ಕುರಿತು ವಿವಿಧ ರಾಜಕೀಯ ಪಕ್ಷಗಳ ಮುಖಂಡರೊಂದಿಗಿನ ಸಭೆಯಲ್ಲಿ ಅವರು ಮಾತನಾಡಿದರು.

‘2026ರ ಅಕ್ಟೋಬರ್ 1ನ್ನು ಅರ್ಹತಾ ದಿನಾಂಕವನ್ನಾಗಿ ಪರಿಗಣಿಸಿ ಈ ವಿಶೇಷ ಸಮಗ್ರ ಮತದಾರರ ಪರಿಷ್ಕರಣೆ ಕಾರ್ಯ ನಡೆಯಲಿದೆ. ಜೂನ್ 20 ರಿಂದ 29ರವರೆಗೆ ಈ ಪ್ರಕ್ರಿಯೆಯ ಸಿದ್ಧತೆ, ಪ್ರಕ್ರಿಯೆಯ ಭಾಗವಾಗಿರುವ ಎಲ್ಲ ಹಂತದ ಅಧಿಕಾರಿ ಅಥವಾ ಸಿಬ್ಬಂದಿಗೆ ತರಬೇತಿ, ಅವಶ್ಯವಿರುವ ದಾಖಲೆಗಳ ಮುದ್ರಣ ಕಾರ್ಯ ನಡೆಯಲಿದೆ’ ಎಂದು ಹೇಳಿದರು.

‘ಜೂನ್ 30 ರಿಂದ ಜುಲೈ 29 ರವರೆಗೆ ಜಿಲ್ಲೆಯ 7 ವಿಧಾನ ಸಭಾ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಒಟ್ಟು 1,853 ಮತಗಟ್ಟೆ ಮಟ್ಟದ ಅಧಿಕಾ ರಿಗಳು (ಬಿಎಲ್ಒಗಳು) ಮನೆ-ಮನೆಗೆ ಭೇಟಿ ನೀಡಿ ಮಾಹಿತಿಯನ್ನು ಸಂಗ್ರಹಿಸಿ ಬಿಎಲ್ಒ ಆ್ಯಪ್ನಲ್ಲಿ ದಾಖಲಿಸುವರು’ ಎಂದರು.

‘ಆಗಸ್ಟ್ 5ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು. ಕರಡು ಮತದಾರರ ಪಟ್ಟಿಗೆ ಆಗಸ್ಟ್ 5 ರಿಂದ ಸೆಪ್ಟೆಂಬರ್ 4ರವರೆಗೆ ಆಕ್ಷೇಪಣೆಗಳನ್ನು ಆಹ್ವಾನಿಸಿ ಅಕ್ಟೋಬರ್ 3ರೊಳಗೆ ಆಕ್ಷೇಪಣೆಗಳನ್ನು ವಿಲೇವಾರಿ ಮಾಡಿ, ಕೊನೆಗೆ ಅಕ್ಟೋಬರ್ 7ಕ್ಕೆ ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು’ ಎಂದು ತಿಳಿಸಿದರು.

ಜಿಲ್ಲೆಯಲ್ಲಿ 1,853 ಮತಗಟ್ಟೆ: ಪ್ರಸ್ತುತ ರಾಯಚೂರು ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 1,853 ಮತಗಟ್ಟೆಗಳಿದ್ದು, ಒಟ್ಟು 17,22,279 ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತ ಜುಬಿನ್ ಮೊಹೊಪಾತ್ರ, ರಾಯಚೂರು ಉಪ ವಿಭಾಗಾಧಿಕಾರಿ ಹಂಪಣ್ಣ ಸಜ್ಜನ, ಲಿಂಗಸುಗೂರು ಉಪ ವಿಭಾಗಾಧಿಕಾರಿ ಬಸವಣೆಪ್ಪ ಕಲಶೆಟ್ಟಿ, ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಯೋಜನಾ ನಿರ್ದೇಶಕ ತಿಮ್ಮಪ್ಪ ಬಿರಾದಾರ, ಸಿಂಧನೂರು ತಹಶೀಲ್ದಾರ್ ಅರುಣ ಕುಮಾರ ದೇಸಾಯಿ, ಚುನಾವಣಾ ಶಾಖೆಯ ಶಿರಸ್ತೇದಾರ ಋಷಿಕೇಶ ಮತ್ತು ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-32-107993763

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.