ಮುದಗಲ್: ಸಮೀಪದ ವ್ಯಾಕರನಾಳ ಗ್ರಾಮದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಮೂರ್ತಿ ಪ್ರತಿಷ್ಠಾಪನೆ ಮಾಡಲಾಯಿತು.

ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಡಾ.ಬಾಬು ಜಗಜೀವನರಾಂ ಅವರ 119ನೇ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತ್ಯುತ್ಸವ ಹಾಗೂ ಅಂಬೇಡ್ಕರ್ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ಸೋಮನಗೌಡ ಪೊಲೀಸ್ ಪಾಟೀಲ ವ್ಯಾಕರನಾಳ ಉದ್ಘಾಟಿಸಿದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಚ್.ಬಿ.ಮುರಾರಿ ಮಸ್ಕಿ ಮಾತನಾಡಿ,‘ಡಾ.ಬಿ.ಆರ್. ಅಂಬೇಡ್ಕರ್ ಅವರ ಆದರ್ಶ ಮತ್ತು ಅವರ ಹಾದಿ ಇಂದಿನ ಸಮಾಜಕ್ಕೆ ಅತ್ಯಗತ್ಯ. ಇವರು ಸಾಮಾಜಿಕ ಸಮಾನತೆ ಮತ್ತು ನ್ಯಾಯದ ಸಂಕೇತವಾಗಿದ್ದಾರೆ’ ಎಂದರು.

ತಾಲ್ಲೂಕು ಸಂಚಾಲಕ ಶರಣಪ್ಪ ಕಟ್ಟಿಮನಿ ಮಾತನಾಡಿ,‘ಅಂಬೇಡ್ಕರ್ ಅವರು ಅಂಧಕಾರ ಹೋಗಲಾಡಿಸಿದರು. ಮೂಢನಂಬಿಕೆ, ಜಾತಿ ಪದ್ಧತಿ ಸೇರಿದಂತೆ ಜನರಲ್ಲಿ ಮನೆ ಮಾಡಿರುವ ಮೌಢ್ಯದ ವಿರುದ್ಧ ಹೋರಾಟ ಮಾಡಿದರು. ಸಂವಿಧಾನ ರಚನೆ ಮಾಡಿ ಪ್ರತಿಯೊಬ್ಬರಿಗೂ ಅನುಕೂಲ ಕಲ್ಪಿಸಿದ್ದಾರೆ’ ಎಂದು ಹೇಳಿದರು.

ನಿರುಪಾದೇಶ್ವರ ಅಂಕಲಗಿ ಮಠದ ಫಕೀರೇಶ್ವರ ಸ್ವಾಮೀಜಿ ಹಾಗೂ ವ್ಯಾಕರನಾಳ ಗ್ರಾಮದ ವೀರಯ್ಯ ಸ್ವಾಮಿ ಆಶೀರ್ವಚನ ನೀಡಿದರು.

ಜಿಲ್ಲಾ ಸಂಚಾಲಕ ಹನುಮಂತಪ್ಪ ವೆಂಕಟಾಪುರ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಸಿದ್ದರಾಮೇಶ್ವರ ಗೌಡ ಹಾಗೂ ಟಿ.ಪಿ.ಶರಣಪ್ಪ ನಾಗಲಾಪುರ ಮಾತನಾಡಿದರು.

ಮಸ್ಕಿ ತಾಲ್ಲೂಕು ಸಂಚಾಲಕ ಮೌನೇಶ ಸುಲ್ತಾನಪುರ, ಲಕ್ಕಪ್ಪ ನಾಗರಾಳ, ನಾಗರಾಜು ಎರಡೋಣ, ಸಂಚಾಲಕ ಬಸವರಾಜ ಬಂಕದ ಮನಿ, ಸಂಗಪ್ಪ ಹಿರೇಮನಿ, ವೀರೇಶ, ಕರಿಯಪ್ಪ, ದ್ಯಾಮಣ್ಣ, ಶಂಕ್ರಪ್ಪ ವ್ಯಾಕರನಾಳ ಹಾಗೂ ಗ್ರಾಮಸ್ಥರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-32-1871481762

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.