ರಾಯಚೂರು: ‘ಬೇಸಿಗೆ ಇರುವುದರಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ಪರಿಹಾರಕ್ಕೆ ಪ್ರಥಮ ಆದ್ಯತೆ ನೀಡಬೇಕು’ಎಂದು ಜಿಲ್ಲಾಧಿಕಾರಿ ಪೂವಿತಾ ಎಸ್. ಸೂಚನೆ ನೀಡಿದರು.

ಇಲ್ಲಿನ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ, ಬಿಸಿಗಾಳಿ ಹಾಗೂ ಜಾನುವಾರುಗಳಿಗೆ ಮೇವಿನ ಲಭ್ಯತೆ ಕುರಿತು ಚರ್ಚಿಸಲು ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯ ಯಾವುದೇ ತಾಲ್ಲೂಕಿನಲ್ಲಿ ನೀರಿನ ಸಮಸ್ಯೆಗಳಿರುವ ಗ್ರಾಮಗಳನ್ನು ಗುರುತಿಸಿ ಮುಂಜಾಗ್ರತೆವಹಿಸಬೇಕು. ಈ ಕುರಿತು ಮಾಹಿತಿ ಪಡೆಯಲು ಪ್ರತಿ ಸೋಮವಾರ ವಿಡಿಯೊ ಸಂವಾದದ ಮೂಲಕ ಸಭೆ ಕರೆಯುತ್ತೇನೆ. ಆಯಾ ತಾಲ್ಲೂಕಿನ ಅಧಿಕಾರಿಗಳು ತಾವಿದ್ದ ಸ್ಥಳದಿಂದಲೇ ಮಾಹಿತಿ ಕೊಡಬೇಕು. ಕುಡಿಯುವ ನೀರಿನ ಸಹಾಯವಾಣಿಗೆ ಬರುವ ಕರೆಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು ಹೇಳಿದರು.

ನೀರಿನ ಸಮಸ್ಯೆಗಳಿರುವ ಕಡೆ ಖಾಸಗಿ ಬೋರ್ವೆಲ್ ಮತ್ತು ಟ್ಯಾಂಕರ್ಗಳ ಮೂಲಕ ಜನರಿಗೆ ನೀರು ಕೊಡುವ ಕೆಲಸ ಮಾಡಬೇಕು. ನೀರಿನ ಗುಣಮಟ್ಟವನ್ನು ಪರೀಕ್ಷೆ ಮಾಡಬೇಕು. ಜಿಲ್ಲೆಯ ಯಾವ- ಯಾವ ಭಾಗದಿಂದ ಸಮಸ್ಯೆಗಳು ಬರುತ್ತವೆ ಎನ್ನುವುದರ ಕುರಿತು ಪಟ್ಟಿ ಮಾಡಿ. ಕುಡಿಯುವ ನೀರಿಗೆ ಸಂಬಂಧಿಸಿದಂತೆ ಯಾವುದಾದರು ರಿಪೇರಿ ಸೇರಿದಂತೆ ಇತರೆ ಕೆಲಸ ಇದ್ದರೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಪ್ರಸ್ತಾವ ಕೊಡಿ. ಇತರೆ ಸಮಸ್ಯೆಗಳಿದ್ದರೆ ನನ್ನ ಗಮನಕ್ಕೆ ತರಬೇಕು. ಜಾನುವಾರುಗಳಿಗೆ ಮೇವಿನ ಸಮಸ್ಯೆಗಳಾಗದಂತೆ ನೋಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರಕುಮಾರ ಕಾಂದೂ ಮಾತನಾಡಿ, ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಸರಿಯಾದ ಮಾಹಿತಿ ನೀಡಬೇಕು. ಗ್ರಾಮ ಮತ್ತು ನಗರ ಪ್ರದೇಶಗಳಲ್ಲಿ ನೀರಿನ ಸಮಸ್ಯೆಗಳಾಗಬಾರದು ಇದಕ್ಕೆ ಯಾವುದೇ ಅನುದಾನದ ಕೊರತೆ ಇಲ್ಲ, ಈ ಕುರಿತು ಅಧಿಕಾರಿಗಳು ಹೆಚ್ಚಿನ ಗಮನಹರಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮೋಹಪಾತ್ರ. ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೆಶಕ ಶರಣಬಸವರಾಜು, ರಾಯಚೂರು ತಾಲ್ಲೂಕು ತಹಶೀಲ್ದಾರ್ ಸುರೇಶ ವರ್ಮಾ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿವಿಧ ಇಲಾಖೆಗೆ ಅಧಿಕಾರಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-32-1851373154

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.