ರಾಯಚೂರು: ‘ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದಂತೆ’ ಎಂಬುದು ಕನ್ನಡದ ಜನಪ್ರಿಯ ಗಾದೆಮಾತು. ನೀರಿನ ತೆರಿಗೆ ಪಾವತಿಸಿಲ್ಲ ಎನ್ನುವ ಒಂದೇ ಕಾರಣಕ್ಕೆ ಮಹಾನಗರಪಾಲಿಕೆ ಅಧಿಕಾರಿಗಳು ಎಪಿಎಂಸಿ ಆವರಣದಲ್ಲಿರುವ ಜಲ ಕುಂಭಕ್ಕೆ ನಳ ಜೋಡಣೆ ಮಾಡುತ್ತಿಲ್ಲ. ಇಲ್ಲಿಯ ಎಪಿಎಂಸಿ ಹಾಗೂ ಮಹಾನಗರಪಾಲಿಕೆ ಅಧಿಕಾರಿಗಳ ಮುಸುಕಿನ ಗುದ್ಟಾಟದಿಂದ ರೈತರು, ಕಾರ್ಮಿಕರು ಹಾಗೂ ಸಿಬ್ಬಂದಿ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ.

ಎಪಿಎಂಸಿ ಆವರಣದಲ್ಲಿರುವ ಜಲಕುಂಭಕ್ಕೆ ಅನೇಕ ವರ್ಷಗಳ ಹಿಂದೆಯೇ ನಲ್ಲಿ ಜೋಡಣೆ ಕಡಿತಗೊಂಡಿದೆ. ನಲ್ಲಿ ಸಂಪರ್ಕ ಕಲ್ಪಿಸುವಂತೆ ಹಿಂದಿನ ನಗರಸಭೆ ಅಧಿಕಾರಿಗಳಿಗೆ ಪತ್ರಗಳನ್ನು ಬರೆಯಲಾಗಿತ್ತು. ಅನೇಕ ಹಿಂಬರಹಗಳ ಮೂಲಕ ಸ್ಮರಿಸುವ ಕೆಲಸ ಮಾಡಲಾಗಿದೆ. ಆದರೆ, ಕುಡಿಯುವ ನೀರಿನ ವಿಷಯದಲ್ಲಿ ನಿರ್ಲಕ್ಷ್ಯ ವಹಿಸಲಾಗುತ್ತಿದೆ ಎಂದು ಎಪಿಎಂಸಿ ಅಧಿಕಾರಿಗಳು ಹೇಳುತ್ತಾರೆ.

‘ನೀರಿನ ಹಿಂದಿನ ಬಾಕಿ ತುಂಬುವಂತೆ ಮಹಾನಗರಪಾಲಿಕೆ ಅಧಿಕಾರಿಗಳು ಒತ್ತಡ ಹಾಕುತ್ತಿದ್ದಾರೆ. ನೀರು ಕೊಡದೇ ಬಾಕಿ ಎಲ್ಲಿಂದ ಪಾವತಿಸಬೇಕು. ಈ ಕುರಿತು ಹಿರಿಯ ಅಧಿಕಾರಿಗಳು ಹಾಗೂ ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಅವರ ಗಮನಕ್ಕೂ ತರಲಾಗಿದೆ. ಮಹಾನಗರಪಾಲಿಕೆ ಆಯುಕ್ತರಿಗೆ ಮತ್ತೊಮ್ಮೆ ಮನವರಿಕೆ ಮಾಡಲಾಗುವುದು’ ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಆದಪ್ಪ ಹೇಳುತ್ತಾರೆ.

‘ರೈತರು, ಕಾರ್ಮಿಕರು ಹಾಗೂ ಇಲ್ಲಿಗೆ ಬರುವ ಲಾರಿ ಚಾಲಕರು, ಕ್ಲೀನರ್ ಹಮಾಲಿಗಳು ತೊಂದರೆ ಅನುಭವಿಸುತ್ತಿದ್ದ ಕಾರಣ ಅಲ್ಲಲ್ಲಿ ಮಣ್ಣಿನ ಮಡಿಕೆಗಳನ್ನು ಇಟ್ಟು ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ‘ ಎಂದು ತಿಳಿಸುತ್ತಾರೆ.

‘ಕುಡಿಯುವ ನೀರಿನ ಪೈಪ್ ಜೋಡಣೆ ಸಂಪರ್ಕ ಕಲ್ಪಿಸುವ ವಿಷಯದಲ್ಲಿ ಅಡೆತಡೆ ಉಂಟು ಮಾಡಲಾಗದು. ಸಂಬಂಧ ಪಟ್ಟವರೊಂದಿಗೆ ಚರ್ಚಿಸಿ ಸಮಸ್ಯೆಗೆ ಶೀಘ್ರ ಪರಿಹಾರ ಕಂಡುಕೊಳ್ಳಲಾಗುವುದು. ಸಾಧ್ಯವಿರುವಷ್ಟು ಬೇಗ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲಾಗುವುದು’ ಎಂದು ಮಹಾನಗರಪಾಲಿಕೆಯ ಆಯುಕ್ತ ಜುಬಿನ್ ಮೊಹಾಪಾತ್ರ ಹೇಳುತ್ತಾರೆ.

‘ಎಪಿಎಂಸಿಯಲ್ಲಿ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಬೇಸಿಗೆ ಶುರುವಾಗಿ ಎರಡು ತಿಂಗಳಾದರೂ ಅಧಿಕಾರಿಗಳು ಗಂಭೀರವಾಗಿಲ್ಲ. ಎಪಿಎಂಸಿ ಕೂಲಿ ಕಾರ್ಮಿಕರು, ರೈತರು, ಎಪಿಎಂಸಿ ವ್ಯಾಪರಸ್ಥರು ಹಾಗೂ ಸಿಬ್ಬಂದಿ ತೊಂದರೆ ಅನುಭವಿಸುತ್ತಿದ್ದಾರೆ’ ಎಂದು ಎಪಿಎಂಇಸಿ ಕೂಲಿಕಾರ್ಮಿಕರು ಹಾಗೂ ಹಮಾಲಿಗಳು ಬೇಸರ ವ್ಯಕ್ತಪಡಿಸುತ್ತಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.