ರಾಯಚೂರು: ‘ಎಲ್ಲಾ ಮಹಿಳಾ ಉದ್ಯೋಗಿಗಳಿಗೆ ಕನಿಷ್ಠ ವೇತನ ಮತ್ತು ಸಮಾನ ವೇತನ ಜಾರಿ ಮಾಡಬೇಕು’ ಎಂದು ಒತ್ತಾಯಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ನಗರದ ಟಿಪ್ಪುಸುಲ್ತಾನ್ ಉದ್ಯಾನದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಎಲ್ಲ ಯೋಜನಾ ಕೆಲಸಗಾರರನ್ನು ಉದ್ಯೋಗಿಗಳು ಎಂದು ಗುರುತಿಸಬೇಕು ಎಂದು ಮನವಿ ಮಾಡಿದರು.

ದುಡಿಯುವ ಮಹಿಳಾ ವಿರೋಧಿ ಕಾರ್ಮಿಕ ಸಂಹಿತೆಗಳನ್ನು ಹಿಂಪಡೆಯಬೇಕು, ಆರ ತಿಂಗಳ ಮಾತೃತ್ವ ರಜೆ ಹಾಗೂ ಆರೈಕೆ ಕೊಠಡಿಗಳ ಸೌಲಭ್ಯ ಒದಗಿಸಬೇಕು. ತಿಂಗಳಲ್ಲಿ ಎರಡು ದಿನ ಮುಟ್ಟಿನ ರಜೆ, ಪ್ರತ್ಯೇಕ ವಿರಾಮ ಕೊಠಡಿ ಮತ್ತು ಶೌಚಾಲಯಗಳ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು.

ಮಹಿಳೆಯರ ಮತ್ತು ಮಕ್ಕಳನ್ನು ರಾತ್ರಿ ವೇಳೆ ಮತ್ತು ಅಪಾಯಕಾರಿ ಕೆಲಸಗಳಲ್ಲಿ ದುಡಿಸುವುದನ್ನು ನಿಷೇಧಿಸಬೇಕು. ಮಹಿಳೆಯರ ಮತ್ತು ಮಕ್ಕಳ ವಿರುದ್ಧ ದೌರ್ಜನ್ಯಗಳನ್ನು ತಡೆಗಟ್ಟುವ ಕ್ರಮಗಳು ಮತ್ತು ಕಠಿಣ ಶಿಕ್ಷೆಗಳನ್ನು ತ್ವರಿತವಾಗಿ ಜಾರಿಗೊಳಿಸುವುದು, ನ್ಯಾಯಮೂರ್ತಿ ವರ್ಮಾ ಸಮಿತಿಯ ಶಿಫಾರಸುಗಳನ್ನು ಜಾರಿಗೊಳಿಸಬೇಕು ಎಂದುಆಗ್ರಹಿಸಿದರು.

ಮರ್ಯಾದೆಗೇಡು ಹತ್ಯೆ ತಡೆಗಾಗಿ ತಕ್ಷಣವೇ ವಿಶೇಷ ಕಾನೂನು ಜಾರಿಗೊಳಿಸಬೇಕು. ಯೋಜನಾ ಕಾರ್ಮಿಕರಾದ ಅಂಗನವಾಡಿ, ಬಿಸಿಯೂಟ, ಆಶಾ ಕಾರ್ಯಕರ್ತರಿಗೂ ರಜೆ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು. ಮರ್ಯಾದೆಗೇಡು ಹತ್ಯೆ ತಡೆಗಾಗಿ ತಕ್ಷಣವೇ ವಿಶೇಷ ಕಾನೂನು ಜಾರಿಗೊಳಿಸಬೇಕು. ಯೋಜನಾ ಕಾರ್ಮಿಕರಾದ ಅಂಗನವಾಡಿ, ಬಿಸಿಯೂಟ, ಆಶಾ ಕಾರ್ಯಕರ್ತರಿಗೂ ರಜೆ ಜಾರಿ ಮಾಡಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಮುಖಾಂತರ ಪ್ರಧಾನಮಂತ್ರಿಗೆ ಮನವಿ ಸಲ್ಲಿಸಿದರು.

ಎಚ್.ಪದ್ಮಾ, ವರಲಕ್ಷ್ಮೀ, ಗೋಕುರಮ್ಮ, ಮಹಾದೇವಿ, ಡಿ.ಎಸ್.ಶರಣಬಸವ, ಕರಿಯಪ್ಪ, ಕೆ.ಜಿ.ವೀರೇಶ ಹಾಗೂ ಮಹಿಳೆಯರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-32-771926045

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.