ರಾಯಚೂರು: 'ಮಹಿಳೆಯರ ಸಬಲೀಕರಣಕ್ಕೆ ಎಲ್ಲರೂ ಕೈಜೋಡಿಸಬೇಕಾಗಿದೆ' ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನಿರ್ಮಲಾ ಬೆಣ್ಣೆ ಹೇಳಿದರು.

ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಕಾಂಗ್ರೆಸ್ ಮಹಿಳಾ ಘಟಕದಿಂದ ಮಂಗಳವಾರ ಹಮ್ಮಿಕೊಂಡಿದ್ದ ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

'ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರು ಪ್ರಮುಖ ಪಾತ್ರವಹಿಸುತ್ತಿದ್ದಾರೆ. ಸಾಧನೆ ಮಾಡಿದ ಮಹಿಳೆಯರ ಬೆನ್ನಲುಬಾಗಿ ಕಾಂಗ್ರೆಸ್ ಮಹಿಳಾ ಘಟಕ ಇರಲಿದೆ' ಎಂದು ವಿವರಿಸಿದರು.

ಈ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸಾಧಕಿಯರಾದ ರಾಣಿ ರಿಚರ್ಡ್, ಶಶಿಕಲಾ, ಮಂಗಮ್ಮ, ಗಿರಜಾ, ಪಾರ್ವತಿ, ಪರವೀನ್ ಬೇಗಂ, ಲಿಯಾಕತ್ ಬೇಗಂ ಅವರನ್ನು ಸನ್ಮಾನಿಸಲಾಯಿತು.

ಕಾಂಗ್ರೆಸ್ ನ ಮಹಿಳಾ ರಾಜ್ಯ ಘಟಕದ ಉಪಾಧ್ಯಕ್ಷೆ ಶ್ರೀದೇವಿ ನಾಯಕ, ಆರ್ಡಿಎ ಸದಸ್ಯೆ ಪ್ರತಿಭಾ ರೆಡ್ಡಿ, ಶಶಿಕಲಾ, ಸುಲೋಚನಾ ಸೇರಿದಂತೆ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.