ರಾಯಚೂರು: ಜಿಲ್ಲಾಡಳಿತದ ವತಿಯಿಂದ ಜೂನ್ 12ರಂದು ವಿಶ್ವ ಬಾಲಕಾರ್ಮಿಕ ವಿರೋಧಿ ದಿನವನ್ನು ಅಚ್ಚುಕಟ್ಟಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ರಾಯಚೂರು ಉಪ ವಿಭಾಗಾಧಿಕಾರಿ ಹಂಪಣ್ಣ ಸಜ್ಜನ್ ಸೂಚಿಸಿದರು.

ನಗರದ ಜಿಲ್ಲಾಡಳಿತ ಕಟ್ಟಡದ ಉಪ ವಿಭಾಗಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಸರ್ಕಾರಿ ನೌಕರರು ತಮ್ಮ ಕಚೇರಿ. ಕೆಲಸ ನಿರ್ವಹಿಸುವ ಸ್ಥಳಗಳಲ್ಲಿ ಒಟ್ಟಾಗಿ ಸೇರಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಪ್ರಮಾಣ ವಚನ ಸ್ವೀಕರಿಸಬೇಕು. ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿ ವತಿಯಿಂದ ಎಲ್ಲ ಗ್ರಾಮಗಳಲ್ಲಿ ಪಿಡಿಒಗಳು, ಕಾರ್ಯದರ್ಶಿಗಳು, ಬಿಲ್ ಕಲೆಕ್ಟರ್, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಸಿಬ್ಬಂದಿ ಒಟ್ಟಾಗಿ ಸೇರಿ ಕಾರ್ಯಕ್ರಮ ಆಚರಣೆ ಮಾಡಿ ಪ್ರಮಾಣ ವಚನ ಸ್ವೀಕರಿಸಬೇಕು’ ಎಂದು ಹೇಳಿದರು.

‘ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ವಿರೋಧಿ ದಿನದ ಬಗ್ಗೆ ಡಂಗೂರ ಸಾರುವುದರ ಮೂಲಕ ಜನರಿಗೆ ಮಾಹಿತಿ ನೀಡುವುದರ ಜೊತೆಗೆ ಈ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಬೇಕು’ ಎಂದರು.

ಪ್ರೌಢ ಶಾಲಾ ಮಕ್ಕಳಿಂದ ಚಿತ್ರಕಲಾ ಪ್ರದರ್ಶನ ಹಾಗೂ ಕಿರು ನಾಟಕ ಪ್ರದರ್ಶನ ಕೈಗೊಂಡು ಜಾಗೃತಿ ಮೂಡಿಸಬೇಕು. ನಗರ ಸ್ಥಳೀಯ ಸಂಸ್ಥೆಗಳಲ್ಲೂ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಿಸಬೇಕು’ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರ ಬಾಬು, ರಾಯಚೂರು ಮಹಾನಗರ ಪಾಲಿಕೆಯ ಆಡಳಿತ ವಿಭಾಗದ ಉಪ ಆಯುಕ್ತೆ ಸಂತೋಷ ರಾಣಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಶರಣಮ್ಮ, ಜಿಲ್ಲಾ ಕಾರ್ಮಿಕ ಅಧಿಕಾರಿ ಆರತಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಪುಷ್ಪಲತಾ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸುನೀತಾ, ಕಾರ್ಮಿಕ ಇಲಾಖೆಯ ರಾಯಚೂರು ವೃತ್ತದ ನಿರೀಕ್ಷಕರಾದ ಪ್ರಿಯಾಂಕ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-32-164943703

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.