ರಾಯಚೂರು: ಜನರಿಗೆ ಕಾಲಕ್ಕೆ ಅನುಗುಣವಾಗಿ ಆರೋಗ್ಯ ಮಾಹಿತಿ ನೀಡುವ ಉದ್ದೇಶದಿಂದ ಮತ್ತು ಜನರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕೆಂಬ ಸದುದ್ದೇಶದಿಂದ ಈ ದಿನವನ್ನು ವಿಶ್ವ ಆರೋಗ್ಯ ದಿನವನ್ನಾಗಿ 1948ರಿಂದ ಆಚರಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರ ಬಾಬು ಹೇಳಿದರು.

ಇಲ್ಲಿಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯಾಲಯದ ಕೃಷ್ಣ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಆರೋಗ್ಯ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಈ ವರ್ಷದ ಘೋಷವಾಕ್ಯ ಆರೋಗ್ಯಕ್ಕಾಗಿ ಒಟ್ಟಾಗಿ ವಿಜ್ಞಾನದೊಂದಿಗೆ ನಿಲ್ಲು ಎಂಬ ಸಂದೇಶದೊಂದಿಗೆ ಗ್ರಾಮೀಣ ಭಾಗದಲ್ಲಿ ಜೀವನ ಶೈಲಿಯಲ್ಲಿ ಬದಲಾವಣೆ ತರಲು, ಸಮುದಾಯದಲ್ಲಿ ಜಾಗೃತಿಗೊಳಿಸಲು ಆರೋಗ್ಯ ಇಲಾಖೆ ಸದಾ ಕಾರ್ಯಾನ್ಮುಖವಾಗಬೇಕು ಎಂದು ತಿಳಿಸಿದರು.

ಜಿಲ್ಲಾ ಸರ್ವೇಕ್ಷಣಾದಿಕಾರಿ ಡಾ.ಗಣೇಶ ಕೆ., ಜಿಲ್ಲಾ ಎನ್ಫೋರ್ಸಮೆಂಟ್ ಅಧಿಕಾರಿ ಡಾ. ಶಿವಕುಮಾರ ನಾರಾ, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಅಮೃತ ಹುಕ್ಕೇರಿ, ಸಹಾಯಕ ಆಡಳಿತ ಅಧಿಕಾರಿ ಶಹಜಾನ್, ಕಚೇರಿ ಅಧಿಕ್ಷಕ ಶ್ರೀಧರ ಕುಲಕರ್ಣಿ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಸಯ್ಯ, ಆಪ್ತ ಸಹಾಯಕ ಲೇಪಾಕ್ಷಯ್ಯ, ಬಿಎಚ್ಇಒ ನಾಗರಾಜ ಸರೋಜಾ ಕೆ., ಹಿರಿಯ ಎಚ್ಐಒ ಸುರೇಶ, ಸೇರಿದಂತೆ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-32-1022352055

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.