ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರು ನಿರ್ವಹಣೆಗಾಗಿ ವಿಶೇಷ ಸಭೆ

ಜಿಲ್ಲಾ ಪಂಚಾಯಿತಿ ಸಿಇಒ ಲಕ್ಷ್ಮೀಕಾಂತರೆಡ್ಡಿ ಹೇಳಿಕೆ
Last Updated 5 ನವೆಂಬರ್ 2020, 14:24 IST
ಅಕ್ಷರ ಗಾತ್ರ

ರಾಯಚೂರು: ತುಂಗಭದ್ರ ಎಡದಂಡೆ ಮತ್ತು ನಾರಾಯಣಪುರ ಬಲದಂಡೆ ಕಾಲುವೆ ನೀರು ನಿರ್ವಹಣೆ, ಸಮಸ್ಯೆಗಳು ಹಾಗೂ ಪರಿಹಾರ ಕುರಿತು ವಿಶೇಷ ಸಾಮಾನ್ಯ ಸಭೆ ಕರೆದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದರು.

ತುಂಗಭದ್ರಾ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಈಗಿರುವ ಬೆಳೆಗೆ ಸಮರ್ಪಕ ನೀರು ಪೂರೈಕೆ ಹಾಗೂ ಬೇಸಿಗೆ ಬೆಳೆಗೆ ನೀರು ಪೂರೈಸಲು ವಿಶೇಷ ಸಭೆ ಕರೆಯಲಾಗುವುದು. ಸದಸ್ಯರು ಸಹಕಾರ ನೀಡಬೇಕು ಎಂದು ಕೋರಿದರು.

ತುಂಗಭದ್ರಾ ಯೋಜನೆ ಮುಖ್ಯ ಅಧೀಕ್ಷಕ ಮಂಜಪ್ಪ ಮಾತನಾಡಿ, ಜಲಾಶಯದಲ್ಲಿ ಸಂಗ್ರಹವಿರುವ ನೀರು ಬೇಸಿಗೆ ಕುಡಿಯುವ ನೀರು, ಈಗಿರುವ ಬೆಳೆ ಮಾತ್ರ ಬಳಕೆ ಮಾಡಲು ಸಾಧ್ಯವಾಗಲಿದೆ. ನದಿ ಮೇಲ್ಬಾಗದಲ್ಲಿ ಮಳೆಯಾಗದೇ ಇರುವುದರಿಂದ ಬೇಸಿಗೆ ಬೆಳೆಗೆ ನೀರು ಹರಿಸುವ ಭರವಸೆ ಈಗಲೇ ನೀಡಲು ಆಗುವುದಿಲ್ಲ. ಇದೇ ತಿಂಗಳ ಮೂರನೇ ವಾರದಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ನಡೆಸಲು ಸಲಹಾ ಸಮಿತಿ ಅಧ್ಯಕ್ಷರೂ ಹಾಗೂ ಉಸ್ತುವಾರಿ ಸಚಿವರೊಂದಿಗೆ ಸಮಾಲೋಚಿಸಲಾಗಿದೆ. ನೀರಿನ ಲಭ್ಯತೆಯ ಮೇಲೆ ನೀರು ಹರಿಸಲು ನಿರ್ಧರಿಸಬೇಕಾಗುತ್ತದೆ. ಕಳೆದ ಬಾರಿಗಿಂತ ಈ ಬಾರಿ ಮಳೆಯಾಗಿದ್ದರೂ ನೀರಿನ ಸಂಗ್ರಹ ಪ್ರಮಾಣ ಕುಸಿದಿದೆ. ಆಂದ್ರಪ್ರದೇಶದ ಪಾಲಿನ ನೀರು ಹಾಗ ರಾಜ್ಯಕ್ಕೆ ಲಭ್ಯವಾಗುವ ನೀರಿನ ಲಭ್ಯತೆ ಮೇಲೆ ನೀರು ಹರಿಸಲು ತೀರ್ಮಾನಿಸಬೇಕಿದೆ ಎಂದರು.

ಶರಬಣ್ಣ ಮಾತನಾಡಿ, ನೀರು ಪೂರೈಸದೇ ನೀರಾವರಿ ಪ್ರದೇಶವೆಂದು ನಮೂದಿಸುವುದನ್ನು ನಿಲ್ಲಿಸಬೇಕು. ಅಕ್ರಮ ನೀರಾವರಿಗೆ ನೀರು ಹರಿಸಲಾಗುತ್ತಿದೆ. ಅಧಿಕೃತ ಪ್ರದೇಶಗಳಿಗೆ ನೀರು ಪೂರೈಸುತ್ತಿಲ್ಲ. ವಿಶೇಷ ಸಭೆ ಕರೆದು ಪರಿಹರಿಸಬೇಕು ಎಂದು ತಿಳಿಸಿದರು.

ಸ್ಥಾಯಿ ಸಮಿತಿ ಅಧ್ಯಕ್ಷರುಗಳಾದ ಶಿವಜ್ಯೋತಿ, ದುರಗಮ್ಮ, ಎನ್.ಕೇಶವರೆಡ್ಡಿ ಹಾಗೂ ಸದಸ್ಯರಾದ ಶಿವಣ್ಣ ಪಹಣಿ, ಶರಬಣ್ಣ ಸಾಹುಕಾರ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT