ಗುರುವಾರ , ಜೂನ್ 17, 2021
22 °C

ರಾಯಚೂರು: ತುಂತುರು ಮಳೆಯಲ್ಲೇ ಧ್ವಜಾರೋಹಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ನಗರದ ಜಿಲ್ಲಾ ಪೊಲೀಸ್ ಮೈದಾನದಲ್ಲಿ ತುಂತುರು ಮಳೆಯಲ್ಲೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭ ನಡೆಯಿತು. ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ಪರೇಡ್ ಕಮಾಂಡರ್ ಬೆಂಗಾವಲಿನೊಂದಿಗೆ ಕವಾಯತು ತಂಡಗಳ ಪರಿವೀಕ್ಷಣೆ ಮಾಡಿದ ಉಪಮುಖ್ಯಮಂತ್ರಿ, ಜನರನ್ನು ಉದ್ದೇಶಿಸಿ ಮಾತನಾಡಿದರು.

ಧ್ವಜಾರೋಹಣ ಸಮಾರಂಭಕ್ಕೆ ಸಾರ್ವಜನಿಕರಿಗೆ ಅವಕಾಶ ಇರಲಿಲ್ಲ.  ಆಹ್ವಾನಿತರು ಮಾತ್ರ ಪಾಲ್ಗೊಂಡಿದ್ದರು. ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಕವಾಯತು ಪ್ರದರ್ಶನ ನೀಡಿದರು.

ಎರಡು ದಿನಗಳಿಂದ ಜಿಲ್ಲೆಯಾದ್ಯಂತ ತುಂತುರು ಮಳೆ ಬೀಳುತ್ತಿದ್ದು, ಮಲೆನಾಡಿನ ವಾತಾವರಣ  ನಿರ್ಮಾಣವಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು