ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: 14 ಜನರಿಗೆ ಪಾಸಿಟಿವ್‌

ಐಸೋಲೇಷನ್‌ ವಾರ್ಡ್‌ನ ಆರು ಸಿಬ್ಬಂದಿಗೆ ಕೋವಿಡ್‌ ದೃಢ
Last Updated 11 ಜೂನ್ 2020, 13:56 IST
ಅಕ್ಷರ ಗಾತ್ರ

ರಾಯಚೂರು: ಜಿಲ್ಲೆಯಲ್ಲಿ ಮತ್ತೆ 14 ಜನರಿಗೆ ಕೋವಿಡ್‌ ದೃಢವಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 375 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಆರ್‌.ವೆಂಕಟೇಶಕುಮಾರ್‌ ಹೇಳಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಓಪೆಕ್‌ ಆಸ್ಪತ್ರೆಯ ಐಸೋಲೇಷನ್ ವಾರ್ಡ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಾಲ್ಕು ಸ್ಟಾಫ್‌ ನರ್ಸ್‌ ಮತ್ತು ಇಬ್ಬರು ಅಟೆಂಡರ್‌ಗಳಿಗೆ ಕೋವಿಡ್‌ ದೃಢವಾಗಿದ್ದು, ಎಲ್ಲರನ್ನು ರಿಮ್ಸ್‌ ಆಸ್ಪತ್ರೆಯ ಐದನೇ ಅಂತಸ್ತಿನಲ್ಲಿ ಐಸೋಲೇಷನ್‌ ವಾರ್ಡ್‌ಗಳಲ್ಲಿ ಇರಿಸಲಾಗಿದೆ. ಅವರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದರು.

ಯಾದಗಿರಿಯಲ್ಲಿ ಸಾಂಸ್ಥಿಕ ಕ್ವಾರಂಟೈನ್‌ ಮುಗಿಸಿಕೊಂಡು ಮರಳಿದ್ದ ರಾಯಚೂರಿನ ವಡ್ಲೂರು ಗ್ರಾಮದ ಮೂವರಿಗೆ ಕೋವಿಡ್‌ ದೃಢವಾಗಿದೆ. ರಾಯಚೂರಿನ ಗೋಲ್‌ ಮಾರ್ಕೆಟ್‌ನಲ್ಲಿ ಒಬ್ಬರಿಗೆ ಪಾಸಿಟಿವ್‌ ಇದೆ. ಉಸಿರಾಟ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮಸ್ಕಿ ಪಟ್ಟಣದ ಇಬ್ಬರಿಗೆ ಪಾಸಿಟಿವ್‌ ಬಂದಿದೆ ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ. ವೇದಮೂರ್ತಿ, ಹೆಚ್ಚುವರಿ ಜಿಲ್ಲಾಧಿಕಾರಿ ದುರಗೇಶ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ. ರಾಮಕೃಷ್ಣ, ರಿಮ್ಸ್ ಆಸ್ಪತ್ರೆಯ ನಿರ್ದೇಶಕ ಡಾ.ಬಸವರಾಜ ಪೀರಾಪೂರ, ಡಾ.ಕೆ. ನಾಗರಾಜ ಇದ್ದರು.

1,366 ವರದಿಗಳ ನಿರೀಕ್ಷೆ: ಜಿಲ್ಲೆಯಿಂದ ಇದೂವರೆಗೆ 17,897 ಜನರ ಗಂಟಲಿನ ದ್ರವ ಮಾದರಿಯನ್ನು ಕೊರೊನಾ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ಅವುಗಳಲ್ಲಿ 16,151 ವರದಿಗಳು ನೆಗೆಟಿವ್ ಆಗಿವೆ. ಉಳಿದ 1,366 ಸ್ಯಾಂಪಲ್‌ಗಳ ಫಲಿತಾಂಶ ಬರಬೇಕಿದೆ.

ದೇವದುರ್ಗ ತಾಲ್ಲೂಕಿನಿಂದ 39, ಲಿಂಗಸೂಗೂರು ತಾಲ್ಲೂಕಿನಿಂದ 5, ಮಾನ್ವಿ ತಾಲ್ಲೂಕಿನಿಂದ 7, ಸಿಂಧನೂರು ತಾಲ್ಲೂಕಿನಿಂದ 18 ಮತ್ತು ರಾಯಚೂರು ತಾಲ್ಲೂಕಿನಿಂದ 71 ಸೇರಿದಂತೆ ಗುರುವಾರ 140 ಜನರ ಗಂಟಲಿನ ದ್ರವ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಫಿವರ್ ಕ್ಲಿನಿಕ್‌ಗಳಲ್ಲಿ 391 ಜನರನ್ನು ಥರ್ಮಲ್ ಸ್ಕ್ರೀನಿಂಗ್‌ಗೆ ಒಳಪಡಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 375 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಆಸ್ಪತ್ರೆಗೆ ದಾಖಲಿಸಲಾಗಿದ್ದವರ ಪೈಕಿ 82 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿರುತ್ತಾರೆ. ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT