ಸೋಮವಾರ, ಆಗಸ್ಟ್ 2, 2021
26 °C

ರಾಯಚೂರು: ಕುಳುವ ಸಂಘದಿಂದ ಪತ್ರ ಚಳವಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಿಂಧನೂರು: ಕೊರಮ, ಕೊರಚ, ಭೋವಿ ಮತ್ತು ಲಂಬಾಣಿ ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಲ್ಲಿಯೇ ಮುಂದುವರೆಸುವಂತೆ ಒತ್ತಾಯಿಸಿ ಬುಧವಾರ ಅಖಿಲ ಕರ್ನಾಟಕ ಕುಳುವ ಮಹಾಸಂಘ ತಾಲ್ಲೂಕು ಘಟಕದಿಂದ ಸ್ಥಳೀಯ ಅಂಚೆ ಕಚೇರಿಯಲ್ಲಿ ಪತ್ರ ಚಳವಳಿ ನಡೆಸಲಾಯಿತು.

ಕೆಲವು ಪಟ್ಟಭದ್ರ ಹಿತಾಶಕ್ತಿಗಳು ಮತ್ತು ರಾಜಕೀಯ ಪ್ರೇರಿತ ಕುತಂತ್ರಿಗಳು ಈ ಜಾತಿಗಳ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಇದು ಸರಿಯಲ್ಲ ಎಂದು ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ರಾಮಕೃಷ್ಣ ಭಜಂತ್ರಿ ಅಸಮಾಧಾನ ವ್ಯಕ್ತಪಡಿಸಿದರು.

ಅಸಮಾನತೆ, ತಾರತಮ್ಯ ಹಾಗೂ ಸಾಮಾಜಿಕ ಕಳಂಕಕ್ಕೆ ಗುರಿಯಾಗಿ ಸಮಾಜದ ಮುಖ್ಯವಾಹಿನಿಗೆ ಬರಲಾಗದೆ ಅಲೆಮಾರಿ ಜಾತಿಗಳಾಗಿಯೇ ಉಳಿದಿವೆ. ಆದ್ದರಿಂದ ಈ ಜಾತಿಗಳು ಯಥಾಸ್ಥಿತಿಯಂತೆ ಎಸ್‍ಸಿ ಪಟ್ಟಿಯಲ್ಲಿಯೇ ಮುಂದುವರೆಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಸಿದರು.

ದುರುಗಪ್ಪ ಕಾರಲಕುಂಟಿ, ಹನುಮಂತ ಎಲೆಕೂಡ್ಲಿಗಿ, ಬಸವರಾಜ ಸುಂಕೇಶ್ವರ, ಬುಡ್ಡಪ್ಪ, ತಿಮ್ಮಣ್ಣ ವಗರನಾಳ, ಕೆಂಪ ಈರಪ್ಪ ಚಿರತ್ನಾಳ, ಅಂಬಣ್ಣ, ಬಳ್ಳಾರೆಪ್ಪ, ಬಾಲಪ್ಪ, ಮರಿಯಪ್ಪ, ರಾಮು, ಹುಲುಗಪ್ಪ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು