ಶನಿವಾರ, ಜುಲೈ 31, 2021
22 °C

‘ಒನ್ ನೇಷನ್ ಒನ್ ರೇಷನ್ ಜಾರಿಯಾಗಲಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಒಂದು ರಾಷ್ಟ್ರ, ಒಂದು ಪಡಿತರ ಚೀಟಿ ( ಒನ್ ನೇಷನ್ ಒನ್ ರೇಷನ್) ಯೋಜನೆಯನ್ನು ರಾಜ್ಯದಲ್ಲೂ ಅನುಷ್ಠಾನ ಗೊಳಿಸಬೇಕು ಎಂದು ಒತ್ತಾಯಿಸಿ ಲೋಕ ಜನಶಕ್ತಿ ಪಾರ್ಟಿಯ ಪದಾಧಿಕಾರಿಗಳು ಜಿಲ್ಲಾಡಳಿತದ ಮೂಲಕ ಕೇಂದ್ರ ಆಹಾರ ಸಚಿವರಿಗೆ ಮಂಗಳವಾರ ಮನವಿ ಸಲ್ಲಿಸಿದರು.

 ಒನ್ ನೇಷನ್ ಒನ್ ರೇಷನ್ ಯೋಜನೆಯನ್ನು ಕೇಂದ್ರ ಸರ್ಕಾರ ಈಗಾಗಲೇ 20 ರಾಜ್ಯಗಳಲ್ಲಿ ಜಾರಿಗೆ ತಂದಿದೆ. ಈ ಯೋಜನೆಯಿಂದ ಪಡಿತರದಾರ ವಲಸೆ ಕಾರ್ಮಿಕರಿಗೆ ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ದುಡಿಯಲು ಹೋದ ಕಾರ್ಮಿಕರಿಗೆ ಅನುಕೂಲವಾಗಲಿದೆ. ಯೋಜನೆ ಮೂಲಕ ಭಾರೀ ಅವ್ಯವಹಾರ ಮತ್ತು ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿದಂತಾಗುತ್ತದೆ.

ಎನ್.ಎಫ್.ಎಸ್.ಎ. ಅಡಿಯಲ್ಲಿ ಪಡಿತರದಾರರಿಗೆ ಒಂದು ಕೆ.ಜಿ. ಅಕ್ಕಿಗೆ ₹ 3, ಗೋಧಿಗೆ ₹ 2 ನಿಗದಿಗೊಳಿಸಿ ಸರ್ಕಾರ ಒಂದು ತಿಂಗಳಿಗೆ ಪಿ.ಡಿ.ಎಸ್ . ಫಲಾನುಭವಿಗಳಿಗೆ 5 ಕೆ.ಜಿ. ಅಕ್ಕಿ ಮತ್ತು 1 ಕೆ.ಜಿ. ದ್ವಿದಳ ಧಾನ್ಯವನ್ನು ಕೊಡುತ್ತದೆ ಇದರಿಂದ ಬಡವರಿಗೆ ಅನುಕೂಲವಾಗಿದೆ. ಈ ಮಹತ್ವದ ಯೋಜನೆಯನ್ನು ತಕ್ಷಣವೇ ಕರ್ನಾಟಕ ರಾಜ್ಯದಲ್ಲೂ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿದರು. ಪಕ್ಷದ ಜಿಲ್ಲಾಧ್ಯಕ್ಷ ಆಶಾರೆಡ್ಡಿ, ರಂಗಪ್ಪ ಮತ್ತಿತರರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು