ಸೋಮವಾರ, ಜೂಲೈ 6, 2020
22 °C

ರೈತರಿಗೆ ಪರಿಹಾರ ನೀಡಲು ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಕೊರೊನಾ ಲಾಕಡೌನ್‌ನಿಂದ ಕಷ್ಟದಲ್ಲಿರುವ ರೈತರಿಗೆ ಉಚಿತ ಬೀಜ, ಗೊಬ್ಬರವನ್ನು ಪೂರೈಸಬೇಕು ಹಾಗೂ ಸರ್ಕಾರ ಸಣ್ಣ, ಅತಿ ಸಣ್ಣ ರೈತರಿಗೆ ಆರ್ಥಿಕ ಸಹಾಯಕ್ಕಾಗಿ ಘೋಷಿಸಲಾದ ಪರಿಹಾರವನ್ನು ತಕ್ಷಣವೇ ನೀಡಬೇಕು ಎಂದು ಕರ್ನಾಟಕ ಪಿಂಜಾರ, ನದಾಫ, ಮನ್ಸೂರಿ ಸಂಘಗಳ ಮಹಾಮಂಡಳಿ ಪದಾಧಿಕಾರಿಗಳು ಸೋಮವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

2019-20 ರಲ್ಲಿ ಹಿಂಗಾರು ಬೆಳೆಗಳಿಗೆ ತುಂಬಿದ ಬೆಳೆವಿಮಾ ಹಣ ಇನ್ನೂ ಪಾವತಿಯಾಗಿಲ್ಲ. ತಕ್ಷಣ ರೈತರಿಗೆ ಬೆಳೆವಿಮಾ ನೀಡಬೇಕು. ವಿವಿಧ ಯೋಜನೆಯಡಿ ಫಲಾನುಭವಿಗಳಿಗೆ ತೊಡಕಾಗಿರುವ ಸಮಸ್ಯೆ ಪರಿಶೀಲಿಸಿ ತಕ್ಷಣ ಪರಿಹಾರ ಸಿಗುವಂತೆ ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಸಂಘದ ರಾಜ್ಯಾಧ್ಯಕ್ಷ ಡಾ. ಅಬ್ದುಲ್ ರಝಾಕ ನದಾಫ, ಜಿಲ್ಲಾ ಘಟಕದ ಅಧ್ಯಕ್ಷ ಬಾಬಾ ಕಲ್ಮಲ್, ಕಾಸಿಂಸಾಬ್ ಯಳ್ಳಿಮನಿ, ಹುಸೇನಸಾಬ ನದಾಫ್, ಡಾ. ದಾವಲಸಾಬ್ ತೋಟದ್, ತಾಜುದ್ದೀನ್ ಜಹಗೀರದಾರ್, ನವೀನ್ ಕುರಹಟ್ಟಿ, ರಾಜಮಹಮ್ಮದ್ ಇದ್ದರು

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು