ಶುಕ್ರವಾರ, ಆಗಸ್ಟ್ 6, 2021
24 °C

ರಾಯಚೂರು: ವೇತನ ಬಿಡುಗಡೆಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ರಾಜ್ಯ ಸರ್ಕಾರ ಘೋಷಣೆ ಮಾಡಿದಂತೆ ಎಲ್ಲಾ ಹೊರಗುತ್ತಿಗೆ ಕಾರ್ಮಿಕರಿಗೆ ಲಾಕ್‌ಡೌನ್‌ ಅವಧಿಯ ಸಂಪೂರ್ಣ ವೇತನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕ ಸಂಘ (ಎಐಯುಟಿಯುಸಿ ಸಂಯೋಜಿತ)ದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಲಾಕ್‌ಡೌನ್ ಅವಧಿಯಲ್ಲಿ ಎಲ್ಲಾ ಗುತ್ತಿಗೆ ಕಾರ್ಮಿಕರಿಗೆ ವೇತನ ನಿಡಬೇಕು ಎಂದು ಸುತ್ತೋಲೆ ಹೊರಡಿಸಿದ್ದರೂ ಹಲವಾರು ಜಿಲ್ಲೆಗಳಲ್ಲಿ ಅಧಿಕಾರಿಗಳು ವೇತನ ನೀಡುತ್ತಿಲ್ಲ ಎಂದು ದೂರಿದರು.

ಜೂನ್ ತಿಂಗಳಿನಿಂದ ಎಲ್ಲಾ ಹೊರಗುತ್ತಿಗೆ ಕಾರ್ಮಿಕರ ಮೂಲಕ ಹಾಸ್ಟೆಲ್‌ಗಳಲ್ಲಿ ಸ್ಯಾನಿಟೈಜೇಷನ್ ಕೆಲಸಕ್ಕೆ ಇನ್ನಿತರ ಪೂರ್ವ ಸಿದ್ಧತಾ ಕೆಲಸಗಳನ್ನು ಪ್ರಾರಂಭಿಸಿ ವೇತನ ನೀಡಬೇಕು.  ಸಮಾಜ ಕಲ್ಯಾಣ ಇಲಾಖೆಯಲ್ಲಿ ಬಾಕಿ ಇರುವ ವೇತನ ಕೂಡಲೇ ಪಾವತಿಸಬೇಕು.

ಕ್ಯಾರೈಂಟೇನ್ ಕೇಂದ್ರಗಳಾಗಿ ಪರಿವರ್ತಿತ ಹಾಸ್ಟೆಲ್ ವಸತಿ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಇಲಾಖೆಯ ಹೊರಗುತ್ತಿಗೆ ಸಿಬ್ಬಂದಿಗೆ ವಿಶೇಷ ಭತ್ಯೆ ನೀಡಬೇಕು. ಹೊರಗುತ್ತಿಗೆ ಕಾರ್ಮಿಕರು ಮತ್ತು ಅವರ ಕುಟುಂಬದವರು ಕೊರೊನಾ ಕಾಯಿಲೆಯಿಂದ ಬಳಲಿದರೆ ಅವರ ಚಿಕಿತ್ಸೆಯನ್ನು ಉಚಿತವಾಗಿ ನೀಡಬೇಕು.

ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡಿರುವ ವಿಶೇಷ ಜೀವ ವಿಮೆ ಸೌಲಭ್ಯವನ್ನೂ ಗುತ್ತಿಗೆ ನೌಕರರಿಗೂ ವಿಸ್ತರಿಸಬೇಕು. ನೇರ ನೇಮಕಾತಿಯಿಂದ ಸಮಸ್ಯೆಯಾದ ಗುತ್ತಿಗೆ ಕಾರ್ಮಿಕರನ್ನು ಸೇವಾ ಹಿರಿತನದ ಅನುಗುಣವಾಗಿ ಇತರೆ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಸಂಘದ ಪದಾಧಿಕಾರಿ ಸಿ.ಮಹೇಶ್, ಉಮಾ, ಗಾಯತ್ರಿ, ಶಾಂತ, ಸುಲೋಚನಾ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು