ಸೋಮವಾರ, ಅಕ್ಟೋಬರ್ 21, 2019
23 °C

ರಾಯಚೂರು ರಾತ್ರಿಯಿಡೀ ಮಳೆ: ಮಸ್ಕಿ ಜಲಾಶಯ ಭರ್ತಿ

Published:
Updated:

ರಾಯಚೂರು: ಜಿಲ್ಲೆಯ ವಿವಿಧೆಡೆ ರಾತ್ರಿಯಿಡೀ ಮಳೆ ಸುರಿದಿದ್ದು, ಮಸ್ಕಿ ಜಲಾಶಯ ಭರ್ತಿಯಾಗಿದೆ. ಜಲಾಶಯದಿಂದ 3 ಸಾವಿರ ಕ್ಯುಸೆಕ್ ನೀರು ಹೊರಬಿಡಲಾಗುತ್ತಿದೆ.

ಜಲಾಶಯದಿಂದ ಹಳ್ಳಕ್ಕೆ ನೀರು ಹರಿಸುತ್ತಿರುವ ಕಾರಣ, ಕೆಲವು ಗ್ರಾಮಗಳ ಸಂಪರ್ಕ ಸೇತುವೆ ಮುಳುಗಡೆಯಾಗಿದೆ.

ಪಕ್ಕದ ಕೊಪ್ಪಳ ಜಿಲ್ಲೆಯ ಕುಷ್ಟಗಿ ಹಾಗೂ ಗದಗ ಜಿಲ್ಲೆಯ ಗಜೇಂದ್ರಗಡದಲ್ಲಿ ಮಳೆ ಬೀಳುತ್ತಿರುವುದರಿಂದ ಜಲಾಶಯಕ್ಕೆ 2,500 ಕ್ಯುಸೆಕ್ ಒಳಹರಿವು ಬರುತ್ತಿದೆ ಎಂದು ಜಲಾಶಯದ ಎಂಜಿನಿಯರ್ ತಿಳಿಸಿದ್ದಾರೆ.

0.5 ಟಿಎಂಸಿ ಅಡಿ ಸಾಮರ್ಥ್ಯದ ಜಲಾಶಯವು 10 ವರ್ಷಗಳಲ್ಲಿ ಇದೇ ಮೊದಲ ಬಾರಿ ಸಂಪೂರ್ಣ ಭರ್ತಿಯಾಗಿದ್ದು, ನೀರು ಹೊರಬಿಡಲಾಗುತ್ತಿದೆ.

ಮಾನ್ವಿಯಲ್ಲೂ ಮಳೆ

ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿಯೂ ರಾತ್ರಿಯಿಡೀ ಮಳೆ ಸುರಿದಿದೆ. ಪಟ್ಟಣದ ಕಾಕತೀಯ ಶಾಲಾ ಆವರಣ ಜಲಾವೃತಗೊಂಡಿದೆ.


ಮಾನ್ವಿ ಪಟ್ಟಣದಲ್ಲಿಯೂ ಉತ್ತಮ ಮಳೆಯಾಗಿದೆ.

 

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

Post Comments (+)