ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂದುವರಿದ ಮಳೆ ಆರ್ಭಟ: ಹಾನಿ

Last Updated 25 ಸೆಪ್ಟೆಂಬರ್ 2019, 12:57 IST
ಅಕ್ಷರ ಗಾತ್ರ

ರಾಯಚೂರು: ಜಿಲ್ಲೆಯಲ್ಲಿ ರಾತ್ರಿಯಿಡೀ ಮಳೆ ಸುರಿದಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಜಮೀನುಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆನೀರು ಸಂಗ್ರಹವಾಗಿ, ಕೊಯ್ಲಿಗೆ ಬಂದಿದ್ದ ಬೆಳೆಗಳ ಹಾನಿಯಾಗಿದೆ.

ರಾಯಚೂರು ತಾಲ್ಲೂಕಿನಲ್ಲಿ 115 ಮಿ.ಮೀ ಅತಿಹೆಚ್ಚು ಮಳೆಯಾಗಿದೆ. ನಗರದಲ್ಲಿ ಮಳೆಯ ರಭಸಕ್ಕೆ ಚರಂಡಿಯಲ್ಲಿರುವ ಕೊಳಚೆ ರಸ್ತೆಗಳಲ್ಲಿ ಹರಡಿಕೊಂಡಿದೆ. ಪಾದಚಾರಿ ಮಾರ್ಗಗಳು ಹಾಳಾಗಿವೆ. ದೇವಸುಗೂರು ಹೋಬಳಿಯ ಹೆಗ್ಗಸನಹಳ್ಳಿ, ಶಕ್ತಿನಗರದ ಲೇಬರ್‌ ಕಾಲೊನಿ ಮನೆಗಳಿಗೆ ನೀರು ನುಗ್ಗಿದೆ.

ಲಿಂಗಸುಗೂರು, ಸಿಂಧನೂರು, ದೇವದುರ್ಗ ಹಾಗೂ ಮಾನ್ವಿ ತಾಲ್ಲೂಕುಗಳ ಎಲ್ಲ ಹೋಬಳಿಗಳಲ್ಲೂ ಮಳೆಯಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಸೆಪ್ಟೆಂಬರ್‌ 27 ರವರೆಗೂ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹಗಲು ಮೋಡ ಮುಸುಕಿದ ವಾತಾವರಣ ಕಂಡು ಬರುತ್ತಿದ್ದು, ಎರಡು ದಿನಗಳಿಂದ ತಡರಾತ್ರಿಯಲ್ಲಿಯೆ ಮಳೆ ಬೀಳುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT