ರಾಯಚೂರು: ನಗರದಲ್ಲಿ ಸೋಮವಾರ ಸುರಿದ ಭಾರಿ ಮಳೆ ಹಿನ್ನೆಲೆಯಲ್ಲಿ ಜಲಾವೃತಗೊಂಡ ಪ್ರದೇಶಗಳಿಗೆ ಮಹಾನಗರಪಾಲಿಕೆಯ ಆಯುಕ್ತ ಜುಬಿನ್ ಮೊಹಾಪಾತ್ರ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು.

ವಿದ್ಯಾ ಭಾರತಿ ಶಾಲೆಯ ಮಾರ್ಗದಲ್ಲಿರುವ ರೈಲ್ವೆ ಕೆಳ ಸೇತುವೆ ಬಳಿ ಭಾರೀ ಪ್ರಮಾಣದಲ್ಲಿ ಮಳೆ ನೀರು ನಿಂತು ರಸ್ತೆ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿರುವುದನ್ನು ವೀಕ್ಷಣೆ ನಡೆಸಿದರು.

‘ಪಂಪ್ ಮೂಲಕ ನೀರನ್ನು ಬೇರೆಡೆ ಸಾಗಿಸುವ ಕಾರ್ಯ ನಡೆದಿದೆ. ಈ ಮಾರ್ಗವಾಗಿ ಸಂಚರಿಸುವ ಜನರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದ ಹಾಗೆ ವಾರದೊಳಗೆ ಇದನ್ನು ಸರಿಪಡಿಸಲಾಗುವುದು’ ಎಂದು ತಿಳಿಸಿದರು.

ಗಂಜ್ ಪ್ರದೇಶ, ಎಪಿಎಂಸಿ ಸೇರಿದಂತೆ ವಿವಿಧೆಡೆ ಸಂಚರಿಸಿದ ಆಯುಕ್ತರು, ಆಯಾ ಕಡೆಗಳಲ್ಲಿ ಮಳೆ ನೀರು ಹರಿಯದೇ ನಿಂತಿರುವುದನ್ನು ಗಮನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.