ಶುಕ್ರವಾರ, ಸೆಪ್ಟೆಂಬರ್ 24, 2021
27 °C

ಜಿಲ್ಲೆಯಲ್ಲಿ ಸಾಧಾರಣ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಜಿಲ್ಲೆಯ ವಿವಿಧೆಡೆ ಶನಿವಾರ ಸಾಧಾರಣ ಮಳೆ ಸುರಿದಿದೆ.

ರಾಯಚೂರು ನಗರ, ಶಕ್ತಿನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೆಲಕಾಲ ಬಿರುಸಾಗಿ ಮಳೆ ಸುರಿಯಿತು. ರಸ್ತೆಗಳಲ್ಲಿ, ತಗ್ಗು-ದಿನ್ನೆಗಳಲ್ಲಿ ನೀರು ಸಂಗ್ರಹವಾಯಿತು. ಇದರಿಂದ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು.

ಮಳೆಯಿಂದ ಬೆಳೆಗಳಿಗೆ ಅನುಕೂಲವಾಗಿದೆ. ಈಗಾಗಲೇ ಬೆಳೆಗಳಲ್ಲಿದ್ದ ಕಳೆ ತೆಗೆದಿರುವ ರೈತರು ಸಂತುಷ್ಟಗೊಂಡಿದ್ದಾರೆ.

ತೊಗರಿ, ಹತ್ತಿ ಹಾಗೂ ಭತ್ತದ ಬೆಳೆಗಳು ಹುಲುಸಾಗಿ ಬೆಳೆದಿವೆ. ತೇವಾಂಶದ ಕೊರತೆಯಿಲ್ಲ.

ಮಳೆಯಿಂದ ಯಾವುದೇ ಹಾನಿ ಉಂಟಾಗಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು