ಸಿಂಧನೂರು: ಸಿಂಧನೂರು ದಸರಾ ಉತ್ಸವದ ಅಂಗವಾಗಿ ಅ.8 ರಂದು ದಸರಾ ಉತ್ಸವ ಸಮಿತಿ ಮತ್ತು ಗಂಜ್ ವರ್ತಕರ ಸಂಯುಕ್ತಾಶ್ರಯದಲ್ಲಿ ರೈತ ದಸರಾ ಕಾರ್ಯಕ್ರಮ ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆಯ ಟೆಂಡರ್ ಹಾಲ್‍ನಲ್ಲಿ ನಡೆಯಲಿದೆ ಎಂದು ದಸರಾ ಉತ್ಸವ ಸಮಿತಿಯ ಕಾರ್ಯಾಧ್ಯಕ್ಷ ತಹಶೀಲ್ದಾರ್ ಅರುಣ್ ಎಚ್.ದೇಸಾಯಿ ತಿಳಿಸಿದ್ದಾರೆ.

ಸೋಮವಾರ ಹೇಳಿಕೆ ನೀಡಿರುವ ಅವರು, ಜೋಡೆತ್ತು, ಟ್ರ್ಯಾಕ್ಟರ್, ಬಂಡಿ ಮತ್ತು ನೇಗಿಲು ಮೆರವಣಿಗೆಯು ಮಿನಿವಿಧಾನಸೌಧ ಕಾರ್ಯಾಲಯದಿಂದ ಬೆಳಿಗ್ಗೆ 11 ಗಂಟೆಗೆ ಪ್ರಾರಂಭವಾಗಲಿದ್ದು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ ನೀಡಲಿದ್ದಾರೆ. ಕೃಷಿ ಮಳಿಗೆಗಳ ಉದ್ಘಾಟನೆಯನ್ನು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಉದ್ಘಾಟಿಸುವರು. ಸ್ತ್ರೀಶಕ್ತಿ ಭವನದ ಆವರಣದಲ್ಲಿ ಸಂಗ್ರಾಣಿ ಕಲ್ಲು, ಗುಂಡು ಎತ್ತುವ ಸ್ಪರ್ಧೆ, ಕೃಷಿ ವಿಶ್ವವಿದ್ಯಾಲಯದ ತಜ್ಞರಿಂದ ಮಣ್ಣಿನ ಸಂರಕ್ಷಣೆ, ನೀರಿನ ನಿರ್ವಹಣೆ ಮತ್ತು ಪರ್ಯಾಯ ಬೆಳೆಗಳ ಕುರಿತು ಕಾರ್ಯಾಗಾರ ಹಾಗೂ ರೈತರೊಂದಿಗೆ ಸಂವಾದ ಮತ್ತು ಕೃಷಿಯಲ್ಲಿ ಸಾಧನೆ ಮಾಡಿದ ರೈತರಿಗೆ ಗೌರವ ಸನ್ಮಾನ ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.