ಸೋಮವಾರ, ಅಕ್ಟೋಬರ್ 26, 2020
29 °C

ಪಂಚಭೂತಗಳಲ್ಲಿ ಲೀನರಾದ ರಾಜ್ಯಸಭಾ ಸದಸ್ಯ ಅಶೋಕ ಗಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಕಲ ಸರ್ಕಾರಿ ಗೌರವಗಳೊಂದಿಗೆ ಕೋವಿಡ್ ಮಾರ್ಗಸೂಚಿಯನ್ವಯ ಅಶೋಕ್ ಗಸ್ತಿ ಅವರ ಅಂತ್ಯಕ್ರಿಯೆ ನೆರವೇರಿಸಲಾಯಿತು.

ರಾಯಚೂರು: ನಗರದ ಹೊರವಲಯ ಪೋತ್ಗಲ್‌ ಸಮೀಪ ಸಕಲ ಸರ್ಕಾರಿ ಗೌರವದೊಂದಿಗೆ ಹಾಗೂ ಅಂತರ ಕಾಪಾಡಿಕೊಂಡು ಮಾರ್ಗಸೂಚಿ ಅನುಸಾರ ಕೋವಿಡ್‌ನಿಂದ ನಿಧನರಾದ ರಾಜ್ಯಸಭಾ ಸದಸ್ಯ ಅಶೋಕ ಗಸ್ತಿ ಅವರ ಅಂತ್ಯಸಂಸ್ಕಾರವನ್ನು ಜಿಲ್ಲಾಡಳಿತದಿಂದ ಶುಕ್ರವಾರ ನೆರವೇರಿಸಲಾಯಿತು.

ಪಿಪಿಇ ಕಿಟ್‌ ಧರಿಸಿದ್ದ ಆರೋಗ್ಯ ಇಲಾಖೆಯ ಸಿಬ್ಬಂದಿ ಆ್ಯಂಬುಲೆನ್ಸ್‌ನಿಂದ ಪಾರ್ಥಿವ ಶರೀರವನ್ನು ಹೊರತಂದು ಕೆಲಕಾಲ ಕೆಳಗೆ ಇರಿಸಿದ್ದರು. ಅಶೋಕ ಗಸ್ತಿ ಅವರ ಪತ್ನಿ ಹಾಗೂ ಕುಟುಂಬದ ಸದಸ್ಯರ ಆಕ್ರಂದನ ಮನ ಕಲಕುವಂತಿತ್ತು. ಕುಟುಂಬ ಸದಸ್ಯರು ನಿಗದಿತ ದೂರದಿಂದಲೇ ದರ್ಶನ ಮಾಡಲು ಅವಕಾಶ ಕಲ್ಪಿಸಲಾಯಿತು.

ಪಿಪಿಇ ಕಿಟ್‌ ಧರಿಸಿದ್ದ ಅಶೋಕ ಗಸ್ತಿ ಅವರ ಪುತ್ರಿಯರಿಗೆ ಪಾರ್ಥಿವ ಶರೀರದ ಹತ್ತಿರ ಹೋಗಲು ಅವಕಾಶ ನೀಡಲಾಗಿತ್ತು. ಪೊಲೀಸರು ಕುಶಾಲತೋಪು ಹಾರಿಸಿದ ಬಳಿಕ, ಪೊಲೀಸ್‌ ವಾದ್ಯ ತಂಡವು ರಾಷ್ಟ್ರಗೀತೆಯನ್ನು ನುಡಿಸಿತು. ಆನಂತರ ಹಿರಿಯ ಪುತ್ರಿ ನೇಹಾ ಅವರು ತಂದೆಯ ಚಿತೆಗೆ ಅಗ್ನಿಸ್ಪರ್ಶ ಮಾಡಿದರು.

ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ನಿಗದಿತ ದೂರದಲ್ಲಿ ಹಾಜರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು