ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನಪದ ಸಂಸ್ಕೃತಿ ಉಳಿಸಿ ಬೆಳೆಸಿ: ಹಿರಿಯ ಸಾಹಿತಿ ಡಾ.ಜಯಲಕ್ಷ್ಮೀ ಮಂಗಳಮೂರ್ತಿ

ಕನ್ನಡ ಜಾನಪದ ಪರಿಷತ್ತಿನ ಮಹಿಳಾ ಘಟಕದಿಂದ ರಾಜ್ಯೋತ್ಸವ, ಜನಪದ ಸಂಭ್ರಮ
Last Updated 27 ನವೆಂಬರ್ 2021, 12:52 IST
ಅಕ್ಷರ ಗಾತ್ರ

ಮಾನ್ವಿ: ‘ಪುರಾತನ ಕಾಲದಿಂದಲೂ ನಮ್ಮ ಸಂಸ್ಕೃತಿಯ ಭಾಗವಾಗಿರುವ ಜನಪದ ಸಾಹಿತ್ಯ ಹಾಗೂ ಕಲೆಗಳನ್ನು ಉಳಿಸಿ ಬೆಳೆಸುವುದು ಅಗತ್ಯ’ ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಾ.ಜಯಲಕ್ಷ್ಮೀ ಮಂಗಳಮೂರ್ತಿ ಹೇಳಿದರು.

ಶನಿವಾರ ಪಟ್ಟಣದ ನೇತಾಜಿ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ತಾಲ್ಲೂಕು ಕನ್ನಡ ಜಾನಪದ ಪರಿಷತ್ತಿನ ಮಹಿಳಾ ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕರ್ನಾಟಕ ರಾಜ್ಯೋತ್ಸವ ಹಾಗೂ ಜನಪದ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಪಾಶ್ಚಿಮಾತ್ಯ ಸಂಸ್ಕೃತಿಯ ಪ್ರಭಾವದಿಂದ ಜನಪದ ಕಲೆಗಳು ನಶಿಸುತ್ತಿವೆ. ಇಂದಿನ ಯುವ ಪೀಳಿಗೆಗೆ ಜನಪದ ಸಾಹಿತ್ಯ ಹಾಗೂ ಕಲೆಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ಸಂಘ ಸಂಸ್ಥೆಗಳು ಶ್ರಮಿಸಬೇಕು’ ಎಂದು ಅವರು ಸಲಹೆ ನೀಡಿದರು.

ಸಂಪನ್ಮೂಲ ವ್ಯಕ್ತಿ ಗಿರಿಧರ ಪೂಜಾರ್ ಅವರು ‘ ಮಕ್ಕಳ ವ್ಯಕ್ತಿತ್ವ ವಿಕಸನದಲ್ಲಿ ಶಿಕ್ಷಣ ಹಾಗೂ ಶಿಕ್ಷಕರ ಪಾತ್ರ’ ಕುರಿತು ವಿಷಯ ಮಂಡಿಸಿದರು. ಈ ಬಾರಿಯ ರಾಜ್ಯ ಸರ್ಕಾರದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಸಾಹಿತಿ ಡಾ.ಜಯಲಕ್ಷ್ಮೀ ಮಂಗಳಮೂರ್ತಿ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಸಮೂಹ ನೃತ್ಯ ಸ್ಪರ್ಧೆಯಲ್ಲಿ ವಿವಿಧ ಶಾಲೆಗಳ 14 ಮಕ್ಕಳ ತಂಡಗಳು ಭಾಗವಹಿಸಿದ್ದವು. ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಕನ್ನಡ ಜಾನಪದ ಪರಿತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ತಾಯಪ್ಪ ಬಿ.ಹೊಸೂರು, ಮಹಿಳಾ ಘಟಕದ ಅಧ್ಯಕ್ಷೆ ಕೆ.ವಿಜಯಲಕ್ಷ್ಮೀ, ಜಿಲ್ಲಾಧ್ಯಕ್ಷೆ ದಾನಮ್ಮ, ನಾಗರತ್ನಮ್ಮ ಬೆಟ್ಟದೂರು, ಡಾ.ಅಂಬಿಕಾ ಮಧುಸೂದನ್, ಡಾ.ಪ್ರಜ್ಞಾ ಹರಿಪ್ರಸಾದ, ಗೀತಾ ವಿವೇಕ್, ಅನುರಾಧ ಸೂಗಪ್ಪಗೌಡ, ಉಷಾಜ್ಯೋತಿ, ಅಶ್ವಿನಿ ಸಂಗಮೇ ಮುಧೋಳ, ಅನುರಾಧ, ನೇತಾಜಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕೆ.ಈ.ನರಸಿಂಹ, ರಮೇಶಬಾಬು ಯಾಳಗಿ, ಸೈಯದ್ ಸಲಾವುದ್ದೀನ್, ನಾಗರಾಜ ಕೊಳ್ಳಿ, ಲಕ್ಷö್ಮಣ ಜಾನೇಕಲ್ ಮತ್ತಿತರ ಪದಾಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT