ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಾಣ ಪ್ರತಿಷ್ಠಾಪನೆ: ಮಸ್ಕಿಯ ವಿವಿಧೆಡೆ ಪೂಜೆ

Published 21 ಜನವರಿ 2024, 15:20 IST
Last Updated 21 ಜನವರಿ 2024, 15:20 IST
ಅಕ್ಷರ ಗಾತ್ರ

ಮಸ್ಕಿ: ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಯ ಪ್ರಯುಕ್ತ ಪಟ್ಟಣದ ವಿವಿಧ ದೇವಸ್ಥಾನಗಳಲ್ಲಿ ಸೋಮವಾರ ವಿಶೇಷ ಪೂಜೆ ಹಾಗೂ ದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಗಚ್ಚಿನಮಠ, ಭ್ರಮರಾಂಬ, ಮಲ್ಲಿಕಾರ್ಜುನ, ಬಸವೇಶ್ವರ ನಗರದ ಬಲಮೂರಿ ಗಣಪತಿ ದೇವಸ್ಥಾನ ಸೇರಿದಂತೆ ವಿವಿಧ ಆಂಜನೇಯ ದೇವಸ್ಥಾನಗಳಲ್ಲಿ ಬೆಳಿಗ್ಗೆಯಿಂದಲೇ ವಿಶೇಷ ಪೂಜೆ, ಅಭಿಷೇಕ, ಲಲಿತಾ ಸಹಸ್ರನಾಮ ಪಠಣ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

ನಂತರ ಭಕ್ತರಿಗೆ ಪ್ರಸಾದದ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಕರೆಗೆ ಓಗೊಟ್ಟ ಬಿಜೆಪಿ ಸೇರಿದಂತೆ ವಿವಿಧ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಹಾಗೂ ಭಕ್ತರು ಕಳೆದ ನಾಲ್ಕೈದು ದಿನಗಳಿಂದ ಪ್ರತಿಯೊಂದು ವಾರ್ಡ್‌ಗಳಲ್ಲಿನ ದೇವಸ್ಥಾನ ತೊಳೆದು ಸ್ವಚ್ಛಗೊಳಿಸಿದರು. ಕಿಲ್ಲಾ ಆಂಜನೇಯ, ಕಣವಿ ಆಂಜನೇಯ ಸೇರಿದಂತೆ ಪ್ರಮುಖ ದೇವಸ್ಥಾನಗಳನ್ನು ಅಲಂಕಾರ ಮಾಡಲಾಗಿದೆ.

ದೈವದಕಟ್ಟೆ ಮುಂಭಾಗದಲ್ಲಿ ದೈವದಕಟ್ಟೆ ಗೆಳೆಯರ ಬಳಗದಿಂದ ಕಾರ್ಯಕ್ರಮ ವೀಕ್ಷಿಸಲು ಎಲ್ಇಡಿ ಪರದೆ ಅಳವಡಿಸುವ ಜೊತೆಗೆ ದಾಸೋಹದ ವ್ಯವಸ್ಥೆ ಮಾಡಲಾಗಿದೆ.

ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸಿಪಿಐ ಬಾಲಚಂದ್ರ ಡಿ.ಲಕ್ಕಂ, ಪಿಎಸ್ಐ ತಾರಾಭಾಯಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT