ಮಸ್ಕಿ (ರಾಯಚೂರು): ಸಿ.ಡಿಗೆ ಸಂಬಂಧಿಸಿದ ವಿಚಾರ ತನಿಖಾ ಹಂತದಲ್ಲಿ ಇರುವುದರಿಂದ ಈ ಪ್ರಕರಣದಿಂದ ಉಪ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗುವುದಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಹೇಳಿದರು.

ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ರೊಂದಿಗೆ ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಕ್ಷೇತ್ರಗಳ ಅಭಿವೃದ್ಧಿ ವಿಚಾರವನ್ನು ಮುಂದಿಟ್ಟುಕೊಂಡು ಜನರಿಂದ ಮತ ಕೇಳುತ್ತಿದ್ದೇವೆ. ನಮ್ಮ ಅಭ್ಯರ್ಥಿಗಳು ಗೆಲ್ಲುವುದು ನಿಶ್ಚಿತ ಎಂದು ಹೇಳಿದರು.

ಬಿಜೆಪಿ ಸಂಸದರು ಗುಲಾಮರಂತೆ ಎಂದು ಸಿದ್ದರಾಮಯ್ಯ ಅವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, 'ಕಾಂಗ್ರೆಸ್ ನಾಯಕರು ಉಪಚುನಾವಣೆಯಲ್ಲಿ ಸೋಲಿನ ಭೀತಿಯಿಂದ ಈ ರೀತಿ ಮಾತನಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ಹಿರಿಯರಾಗಿದ್ದರು ಈ ರೀತಿ ಮಾತನಾಡಬಾರದು' ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.