ಶನಿವಾರ, ಫೆಬ್ರವರಿ 29, 2020
19 °C

ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಿಂಧನೂರು (ರಾಯಚೂರು): ವಸತಿಶಾಲೆಯಿಂದ ತಂದೆಯೊಂದಿಗೆ ಗ್ರಾಮಕ್ಕೆ ಹೋಗುವ ಮಾರ್ಗದಲ್ಲಿ, ತಂದೆಗೆ ಮದ್ಯಸೇವನೆ ಮಾಡಿಸಿ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ ಎಸಗಿದ್ದ ಮಸ್ಕಿ ತಾಲ್ಲೂಕಿನ ರತ್ನಾಪುರ ಹಟ್ಟಿ ಗ್ರಾಮದ ಸಣ್ಣಪಾಮಣ್ಣನನ್ನು ಸಿಂಧನೂರು ಗ್ರಾಮೀಣ ಠಾಣೆ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಆರೋಪಿ ಬಳಸುತ್ತಿದ್ದ ಬೈಕ್‌ ಕಲರ್‌ ಸುಳಿವು ಆಧರಿಸಿ ಬಂಧಿಸಲಾಗಿದೆ. ಶೋಧ ಕಾರ್ಯಾಚರಣೆ ನಡೆಸಿದ್ದ ಪೊಲೀಸರ ತಂಡಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಬಹುಮಾನ ಘೋಷಿಸಿದ್ದಾರೆ. ಅತ್ಯಾಚಾರ ಘಟನೆ ಜನವರಿ 24 ರಂದು ನಡೆದಿತ್ತು. ಪುತ್ರಿಯ ಅತ್ಯಾಚಾರ ಘಟನೆಯಿಂದ ನೊಂದಿದ್ದ ತಂದೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆರೋಪಿಯನ್ನು ಪತ್ತೆ ಮಾಡುವಂತೆ ವಿವಿಧ ಸಂಘ–ಸಂಸ್ಥೆಗಳು ಪ್ರತಿಭಟನೆ ಮಾಡಿದ್ದವು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)