ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೌಕಿಮಠದಲ್ಲಿ ಸಿದ್ಧರಾಮೇಶ್ವರ ಜಾತ್ರೆಯ ರಥೋತ್ಸವ 19ರಂದು

Last Updated 14 ಅಕ್ಟೋಬರ್ 2019, 21:11 IST
ಅಕ್ಷರ ಗಾತ್ರ

ರಾಯಚೂರು: ತಾಲ್ಲೂಕಿನ ಚಿಕ್ಕಸುಗೂರಿನ ಚೌಕಿಮಠದ ಆವರಣದಲ್ಲಿ ಸಿದ್ಧರಾಮೇಶ್ವರರ 121ನೇ ಜಾತ್ರಾ ಮಹೋತ್ಸವದ ನಿಮಿತ್ತ ಅಕ್ಟೋಬರ್ 19ರಂದು ರಥೋತ್ಸವ ನಡೆಯಲಿದೆ ಎಂದು ಚೌಕಿಮಠದ ಸಿದ್ಧಲಿಂಗ ಸ್ವಾಮೀಜಿ ಹೇಳಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ ಮಹಾರುದ್ರಾಭಿಷೇಕ ಪೂಜೆ, ಮಧ್ಯಾಹ್ನ ಧರ್ಮಸಭೆ ನಡೆಯಲಿದೆ. ಮಧ್ಯಾಹ್ನ 2 ಗಂಟೆಗೆ ಕೃಷಿ ವಿಶ್ವವಿದ್ಯಾಲಯದಿಂದ ದ್ರೋಣ್‌ ಮೂಲಕ ಸಿಂಪರಣೆಯ ಪ್ರಾತ್ಯಕ್ಷಿಕೆ ಪ್ರದರ್ಶನ ಮಾಡಲಾಗುತ್ತದೆ. ಸಂಜೆ 4ಗಂಟೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಾಯೋಜಿತ ಕಾರ್ಯಕ್ರಮಗಳು ಆಯೋಜಿಸಲಾಗಿದೆ ಎಂದರು.

ಬೆಂಗಳೂರಿನ ಕೊಳದಮಠ ಸಂಸ್ಥಾನದ ಶಿವಶಾಂತವೀರ ಸ್ವಾಮೀಜಿ, ಹಾವೇರಿಯ ಹುಕ್ಕೇರಿ ಮಠದ ಸದಾಶಿವ ಸ್ವಾಮೀಜಿ, ಮಾನ್ವಿಯ ಕಲ್ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ದುಂಡಸಿ ವಿರಕ್ತಮಠದ ಕುಮಾರ ಸ್ವಾಮೀಜಿ, ಸೋಮವಾರ ಪೇಟೆಯ ಹಿರೇಮಠದ ಅಭಿನವ ರಾಚೋಟಿ ಶಿವಾಚಾರ್ಯ ಸ್ವಾಮೀಜಿ, ಯದ್ದಲದೊಡ್ಡಿಯ ಮಹಾಲಿಂಗ ಸ್ವಾಮೀಜಿ ಸೇರಿದಂತೆ ಇಂಗಳೇಶ್ವರ, ದುಧನಿ, ಮಂಠಾಳ, ಹರಸೂರು, ಸುಲ್ತಾನಪುರ, ಗದಗ, ಅಂಕಲಿಮಠ ಹಾಗೂ ಕಲ್ಲೂರಿನ ಮಠದ ಸ್ವಾಮೀಜಿಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು, ಸಚಿವ ಸಿ.ಟಿ.ರವಿ, ಸಂಸದ ರಾಜಾ ಅಮರೇಶ್ವರ ನಾಯಕ, ಶಾಸಕರಾದ ರಾಜಶೇಖರ ಪಾಟೀಲ, ಎಸ್.ಆರ್.ರೆಡ್ಡಿ, ಚಂದ್ರಶೇಖರ ಪಾಟೀಲ, ವೆಂಕಟರಾವ ನಾಡಗೌಡ, ಬಸನಗೌಡ ದದ್ದಲ, ಡಾ.ಶಿವರಾಜ ಪಾಟೀಲ, ಶಿವನಗೌಡ ನಾಯಕ, ರಾಜಾ ವೆಂಕಟಪ್ಪ ನಾಯಕ, ಎನ್.ಎಸ್.ಬೋಸರಾಜು, ಬಸವರಾಜ ಮತ್ತಿಮೂಡ್, ಬಸವರಾಜ ಪಾಟೀಲ ಇಟಗಿ, ಶರಣಪ್ಪ ಮಟ್ಟೂರು, ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮಿಕಾಂತರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದರು.

ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಪುರಾಣ ಪ್ರವಚನ ಕಾರ್ಯಕ್ರಮವನ್ನು ಅಕ್ಟೋಬರ್ 11ರಿಂದ ಆರಂಭ ಮಾಡಲಾಗಿದ್ದು, 20ರವರಗೆ ನಡೆಯಲಿದೆ. ಜೊತೆಗೆ ವಿವಿಧ ಕಾರ್ಯಕ್ರಮಗಳು ನಡೆಸಲಾಗುತ್ತಿದೆ. 18ರಂದು ಧ್ವಜಾರೋಹಣ ಮಾಡಲಾಗುತ್ತದೆ. 20ರಂದು ಉಚ್ಛ್ರಾಯ ಹಾಗೂ ಕಡುಬಿನ ಕಾಳಗ ನಡೆಯಲಿದೆ ಎಂದು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT