ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಳಗಾನೂರು: ಅದ್ದೂರಿ ರಥೋತ್ಸವ

ಕಾರ್ತಿಕೋತ್ಸವಕ್ಕೆ ಮೆರುಗು ತಂದ ವಿವಿಧ ಜಾನಪದ ಕಲಾ ತಂಡಗಳು
Last Updated 14 ಡಿಸೆಂಬರ್ 2021, 4:37 IST
ಅಕ್ಷರ ಗಾತ್ರ

ಮಸ್ಕಿ: ಕಾರ್ತಿಕ ಮಾಸದ ನಿಮಿತ್ತ ತಾಲ್ಲೂಕಿನ ಬಳಗಾನೂರು ಗ್ರಾಮದಲ್ಲಿ ವೀರಭದ್ರೇಶ್ವರರ ಕಾರ್ತಿಕೋತ್ಸವ ಹಾಗೂ ನೂತನ ರಥೋತ್ಸವವು ಸೋಮವಾರ ಅದ್ದೂರಿಯಾಗಿ ನಡೆಯಿತು. ಜಾತ್ರಾ ಮಹೋತ್ಸವ ನಿಮಿತ್ತ ರವಿವಾರ ಬೆಳಿಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ನೂತನ ರಥಕ್ಕೆ ಪ್ರಸಾದಿಮಠದ ಬಸವರಾಜಸ್ವಾಮಿ ನೇತೃತ್ವದಲ್ಲಿ ಮಹಾರುದ್ರಹೋಮ, ಹಾಗೂ ವೀರಭದ್ರೇಶ್ವರರ ವಿಶೇಷ ಪೂಜೆ ಹಾಗೂ ಇಡೀ ದಿನ ಭಜನೆ ಕಾರ್ಯಕ್ರಮಗಳು ನಡೆದವು.

ಸೋಮವಾರ ಬೆಳಿಗ್ಗೆ ವೀರಭದ್ರೇಶ್ವರ ಶಿಲಾ ವಿಗ್ರಹಕ್ಕೆ ಅಭಿಷೇಕ, ಹೋಮ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನಡೆದವು. ಗಂಗಾಸ್ಥಳದಿಂದ ವೀರಭದ್ರೇಶ್ವರರ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯ ಮೂಲಕ ವೀರಭದ್ರೇಶ್ವರ ದೇವಸ್ಥಾನಕ್ಕೆ ತರಲಾಯಿತು. ಪೂರ್ಣಕುಂಭ ಹೊತ್ತ ನೂರಾರು ಮಹಿಳೆಯರು ಭಾಗವಹಿಸಿದ್ದರು.

ಮೆರವಣಿಗೆಯಲ್ಲಿ ನಂದಿಕೋಲು ಕುಣಿತ, ವೀರಗಾಸೆ ನೃತ್ಯ ಸೇರಿದಂತೆ ವಿವಿಧ ಜಾನಪದ ಕಲಾ ತಂಡಗಳು ಭಾಗವಹಿಸಿದ್ದವು. ದೇವಸ್ಥಾನದ ಆವರಣದಲ್ಲಿ ಮಹಿಳೆಯರು ಸೇರಿದಂತೆ ನೂರಾರು ಭಕ್ತರು ಅಗ್ನಿ ಕುಂಡ ಹಾಯ್ದು ಭಕ್ತಿ ಸಮರ್ಪಿಸಿದರು. ಸಂಜೆ ನೂತನ ರಥೋತ್ಸವಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು. ಭಕ್ತರ ಜಯಘೋಷಗಳ ನಡುವೆ ವೀರಭದ್ರೇಶ್ವರರ ಉತ್ಸವ ಮೂರ್ತಿಯನ್ನು ರಥದ ಮೇಲೆ ಪ್ರತಿಷ್ಠಾಪಿಸಲಾಯಿತು. ಬ್ರಹನ್ಮಠದ ವೀರಭದ್ರಶಿವಾಚಾರ್ಯ ಸ್ವಾಮೀಜಿ, ವಿರಕ್ತಮಠದ ಅಭಿನವ ಮರಿಸಿದ್ದ ಮಹಾಸ್ವಾಮೀಜಿ ಅವರು ರಥೋತ್ಸವಕ್ಕೆ ಚಾಲನೆ ನೀಡಿದರು. ನೂರಾರು ಭಕ್ತರು ರಥ ಎಳೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ವಿವಿಧ ಮಠಾಧೀಶರು, ಶಾಸಕ ಆರ್. ಬಸನಗೌಡ ತುರ್ವಿಹಾಳ, ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು. ಜಾತ್ರೆಗೆ ಬಂದ ಭಕ್ತರಿಗೆ ಪ್ರಸಾದ ‍ವ್ಯವಸ್ಥೆ ಮಾಡಲಾಗಿತ್ತು. ರಥೋತ್ಸವ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT