ರಾಯಚೂರು: ರಾಜ್ಯದಲ್ಲಿರುವ ಸ್ಮಶಾನ ಕಾರ್ಮಿಕರ ಗಣತಿ ಮಾಡಿ ಬಜೆಟ್ನಲ್ಲಿ ನಿವೃತ್ತಿ ವೇತನ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಮಸಣ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಮಸಣ ಕಾರ್ಮಿಕರು ನಗರದ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಮಸಣ ಕಾರ್ಮಿಕರು ಈವರೆಗೂ ಬಿಟ್ಟಿ ಚಾಕರಿ ಮಾಡಿಕೊಂಡು ಬಂದಿದ್ದಾರೆ. ಸಾವಿರಾರು ವರ್ಷಗಳಿಂದ ಆದ ಅನ್ಯಾಯ ಸರಿಪಡಿಸಿ ನ್ಯಾಯ ಒದಗಿಸಬೇಕು ಎಂದು ಮನವಿ ಮಾಡಿದರು.

ರಾಜ್ಯದಾದ್ಯಂತ ಲಕ್ಷಾಂತರ ಕುಟುಂಬಗಳಿವೆ. ಮಸಣಗಳನ್ನು ಕಾರ್ಮಿಕರೇ ನಿಯಮಿತವಾಗಿ ನಿರ್ವಹಿಸುತ್ತಿದ್ದಾರೆ. ಶವಗಳನ್ನು ಹೂಳಲು ಬರುವವರಿಗೆ ಹಾದಿ ನಿರ್ಮಿಸುವುದು, ಕುಳಿತುಕೊಳ್ಳಲು ಬಯಲು ಮಾಡಿಕೊಡುತ್ತಿದ್ದಾರೆ ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿ, ನಗರ ಸ್ಥಳೀಯ ಸಂಸ್ಥೆಗಳು ಮಸಣಗಳನ್ನು ಸಮರ್ಪಕವಾಗಿ ನಿರ್ವಹಿಸಲು ಕ್ರಮವಹಿಸುತ್ತಿಲ್ಲ.ಮಸಣಗಳು ಒತ್ತುವರಿಯಾಗಿರುವುದರಿಂದ ಅಲ್ಲಿ ಕಾರ್ಯ ನಿರ್ವಹಿಸುವ ಕಾರ್ಮಿಕರು ಸಂಕಷ್ಟ ಅನುಭವಿಸಬೇಕಾಗುತ್ತದೆ. ಘಾಟು ವಾಸನೆಯಿಂದ ಅರೆ ಬೆಂದ ವಿಕಾರ ರೂಪಿ ಹೆಣಗಳನ್ನು ಬರಿಗೈಯಲ್ಲಿ ಕಿತ್ತೆಸೆದು, ಹೊಸ ಶವಗಳಿಗೆ ಸ್ಥಳ ಮಾಡಬೇಕಾಗುತ್ತದೆ. ನಮಗೆ ಸುರಕ್ಷತಾ ಕ್ರಮಗಳಿಲ್ಲ ಎಂದು ದೂರಿದರು.

ಎಲ್ಲ ಮಸಣಗಳಲ್ಲಿ ಪಾರಂಪರಿಕವಾಗಿ ಕಾರ್ಯ ನಿರ್ವಹಿಸುವ ಮಸಣ ಕಾರ್ಮಿಕರ ಕುಟುಂಬಗಳ ಸದಸ್ಯರ ಗಣತಿ ಮಾಡಬೇಕು. ಅವರ ಪುನರ್ವಸತಿಗೆ ಕ್ರಮ ವಹಿಸಬೇಕು. ಪ್ರತಿ ಕುಣಿ ಅಗೆಯುವ ಮತ್ತು ಮುಚ್ಚುವ ಕೆಲಸವನ್ನು ಉದ್ಯೋಗ ಖಾತ್ರಿ ಯೋಜನೆಯಡಿಯ ಉದ್ಯೋಗವೆಂದು ಪರಿಗಣಿಸಿ, ಕುಣಿ ಅಗೆಯುವ ಮತ್ತು ಮುಚ್ಚುವ ಕಾರ್ಮಿಕರಿಗೆ ಸ್ಥಳೀಯ ಸಂಸ್ಥೆಗಳ ಮೂಲಕ ಕನಿಷ್ಠ ₹ 3,000 ಕೂಲಿ ಪಾವತಿಸಲು ಕ್ರಮ ವಹಿಸಬೇಕು ಎಂದು ಮನವಿ ಮಾಡಿದರು.

ಮಸಣ ಕಾರ್ಮಿಕರಿಗೆ ಅಗತ್ಯ ಸುರಕ್ಷತಾ ಪರಿಕರಗಳನ್ನು ಸ್ಥಳೀಯ ಸಂಸ್ಥೆಗಳ ಮೂಲಕ ಒದಗಿಸಬೇಕು. 45 ವರ್ಷ ಮೇಲ್ಪಟ್ಟ ಎಲ್ಲ ಮಸಣ ಕಾರ್ಮಿಕರಿಗೆ ಮಾಸಿಕ ಸಹಾಯಧನ ಅಥವಾ ಪಿಂಚಣಿಯಾಗಿ ಕನಿಷ್ಠ ವೇತನ ಕೊಡಬೇಕು ಎಂದು ಒತ್ತಾಯಿಸಿದರು.

ಸ್ಮಶಾನ ಕಾರ್ಮಿಕರಿಗೆ ಮನೆ ಅಥವಾ ನಿವೇಶನ ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು.

ಸಂಘದ ಜಿಲ್ಲಾ ಸಂಚಾಲಕ ಕೆ.ಜಿ.ವೀರೇಶ ನೇತೃತ್ವದಲ್ಲಿ ಅಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿಪತ್ರ ಸಲ್ಲಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260305-32-919770917

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.