ಭಾನುವಾರ, 13 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮುಡಾ ಹಗರಣ ತನಿಖೆ ನಡೆಯಲಿ: ಜಿ. ಕುಮಾರ ನಾಯಕ

Published : 1 ಅಕ್ಟೋಬರ್ 2024, 14:27 IST
Last Updated : 1 ಅಕ್ಟೋಬರ್ 2024, 14:27 IST
ಫಾಲೋ ಮಾಡಿ
Comments

ಲಿಂಗಸುಗೂರು: ‘ಮೈಸೂರು ನಗರಾಭಿವೃದ‍್ದಿ ಪ್ರಾಧಿಕಾರ (ಮುಡಾ) ಹಗರಣದಲ್ಲಿ ತಮ್ಮ ಹೆಸರನ್ನು ಎಳೆದು ತಂದಿದ್ದಾರೆ. ಈಗಾಗಲೆ ಕ್ರಿಮಿನಲ್‍ ಮೊಕದ್ದಮೆ ದಾಖಲಾಗಿದ್ದು ತನಿಖೆ ನಡೆಯಲಿ. ತನಿಖೆಯಿಂದ ಸತ್ಯಾಸತ್ಯತೆ ಹೊರಬೀಳಲಿದೆ’ ಎಂದು ಸಂಸದ ಜಿ. ಕುಮಾರ ನಾಯಕ ಹೇಳಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಸಿದ್ಧರಾಮಯ್ಯ ಕುಟುಂಬಸ್ಥರಿಗೆ ನಿವೇಶನ ಹಂಚಿಕೆ, ಕೃಷಿಯೇತರ ಜಮೀನಾಗಿ ಪರಿವರ್ತಿಸುವ, ನೊಟಿಫೈಡ್‍, ಡಿ ನೊಟಿಫೈಡ್‍ ಈ ಸಂದರ್ಭದಲ್ಲಿ ತಾವು ಜಿಲ್ಲಾಧಿಕಾರಿ ಆಗಿರಲಿಲ್ಲ. ಈ ಅವಧಿಯಲ್ಲಿ ಆರೇಳು ಜನ ಜಿಲ್ಲಾಧಿಕಾರಿಗಳು ಬಂದು ಹೋಗಿದ್ದಾರೆ. ತನಿಖೆ ಹಂತದಲ್ಲಿರುವುದರಿಂದ ಯಾವುದನ್ನು ಸ್ಪಷ್ಟಪಡಿಸಲಾರೆ’ ಎಂದರು.

‘ರಾಯಚೂರು ಮತ್ತು ಯಾದಗಿರಿ ಜನತೆ ಸೇವೆ ಮಾಡಲು ಅವಕಾಶ ನೀಡಿದ್ದಾರೆ. ತಮ್ಮ ಅವಧಿಯಲ್ಲಿ ಈ ಎರಡು ಜಿಲ್ಲೆಗಳ ಪ್ರತಿನಿಧಿಗಳ, ಸಮಸ್ಯೆಗಳ ಧ್ವನಿಯಾಗಿ ಸಂಸತ್ತನಲ್ಲಿ ಪ್ರತಿನಿಧಿಸುವೆ. ಆದ್ಯತೆ ಮೇರೆಗೆ ಕ್ಷೇತ್ರದ ಅಭಿವೃದ್ಧಿಗೆ ಪ್ರೋತ್ಸಾಹಿಸುವೆ. ಸ್ಥಳೀಯ ಸಮಸ್ಯೆಗಳ ಕುರಿತು ಪಕ್ಷದ ಮುಖಂಡರು, ಪ್ರತಿನಿಧಿಗಳ ಜೊತೆಗೆ ಚರ್ಚಿಸುವೆ. ಕುಡಿವ ನೀರು, ನೀರಾವರಿ, ರೈಲ್ವೆ ಸೇರಿದಂತೆ ಅಗತ್ಯ ಸೌಲಭ್ಯ ಕಲ್ಪಿಸಲು ಪ್ರಯತ್ನಿಸುವೆ’ ಎಂದು ತಿಳಿಸಿದರು.

ಮಾಜಿ ಶಾಸಕ ಡಿ.ಎಸ್‍ ಹೂಲಗೇರಿ, ಪುರಸಭೆ ಅಧ್ಯಕ್ಷ ಬಾಬುರಡ್ಡಿ ಮುನ್ನೂರು, ಉಪಾಧ್ಯಕ್ಷೆ ಶರಣಮ್ಮ ಕೊಡ್ಲಿ, ಚುನಾವಣಾ ವೀಕ್ಷಕ ಜಯಂತರಾವ್‍ ಪತಂಗೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT