ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಅಂಬೇಡ್ಕರ್ ಓದು’ ಭಾಷಣ ಸ್ಪರ್ಧೆ: ಬಹುಮಾನ

Last Updated 17 ಜನವರಿ 2022, 11:05 IST
ಅಕ್ಷರ ಗಾತ್ರ

ಶಕ್ತಿನಗರ: ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್) ದಯಾನಂದ ಆಂಗ್ಲೋ ವೇದಿಕೆಯ (ಡಿಎವಿ ಪಬ್ಲಿಕ್‌ ಸ್ಕೂಲ್‌) ಶಾಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ‘ಡಾ.ಬಿ.ಆರ್‌.ಅಂಬೇಡ್ಕರ್ ಓದು' ವಿಷಯ ಕುರಿತು ವಿದ್ಯಾರ್ಥಿಗಳಿಗೆ ಭಾಷಣ ಮತ್ತು ಪ್ರಬಂಧ ಸ್ಪರ್ಧೆ ನಡೆಯಿತು.

ಡಿಎವಿ ಪಬ್ಲಿಕ್‌ ಸ್ಕೂಲ್‌ನ ಪ್ರಾಂಶುಪಾಲ ವಿ.ಕೆ.ಅಂಗಡಿ ಮಾತನಾಡಿ, ‘ಸಂವಿಧಾನದ ಜೀವಾಳವಾಗಿರುವ ಡಾ.ಬಿ.ಆರ್. ಅಂಬೇಡ್ಕರ್ ಅವರ ತತ್ವಗಳು ಸದಾ ಅನುಕರಣೀಯ‘ ಎಂದು ಹೇಳಿದರು.

ಮೇಲುಸ್ತುವಾರಿ ಶಿಕ್ಷಕ ಮೋಹನ ಉಪ್ಪೇರಿ ಹಾಗೂ ಶಿಕ್ಷಕ ತಿಪ್ಪೇಸ್ವಾಮಿ ಶಿಕ್ಷಕರು ಪಾಲ್ಗೊಂಡಿದ್ದರು.

ಚಿತ್ರಕಲಾ ಶಿಕ್ಷಕ ಸುರೇಶ್ ಅವರು ಸಂಘಟಕರಾಗಿ ಕಾರ್ಯನಿರ್ವಹಿಸಿದರು. ಶಿಕ್ಷಕಿ ಪದ್ಮಿನಿ ನಿರೂಪಿಸಿ, ವಂದಿಸಿದರು.

ಸ್ಪರ್ಧೆಗಳಲ್ಲಿ ಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದ್ದರು. ವಿಜೇತರಾದ ವಿದ್ಯಾರ್ಥಿಗಳಿಗೆ ಇಲಾಖೆಯ ವತಿಯಿಂದ ನೀಡಲಾಗುವ ಬಹುಮಾನ ಮತ್ತು ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT