ಸೋಮವಾರ, ಜನವರಿ 20, 2020
21 °C

ರೆಡ್‌ ರಿಬ್ಬನ್‌ ಕ್ಲಬ್‌ಗೆ ರಾಷ್ಟ್ರೀಯ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಬಳ್ಳಾರಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಈಚೆಗೆ ನಡೆದ ಏಡ್ಸ್‌ ದಿನಾಚರಣೆ ಸಮಾರಂಭದಲ್ಲಿ ರಾಯಚೂರಿನ ಸೀತಾ ಸುಬ್ಬರಾಜು ಸ್ಮಾರಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ರೆಡ್ ರಿಬ್ಬನ್ ಕ್ಲಬ್‌ಗೆ ‘ರಾಷ್ಟ್ರೀಯ ಅತ್ಯುತ್ತಮ ರೆಡ್ ರಿಬ್ಬನ್ ಕ್ಲಬ್’ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಶಾಸಕ ಜಿ. ಸೋಮಶೇಖರರೆಡ್ಡಿ ಅವರು ಸೀತಾ ಸುಬ್ಬರಾಜು ಸ್ಮಾರಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಅಧಿಕಾರಿ ಶ್ರೀನಿವಾಸ ರಾಯಚೂರುಕರ್ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಿದರು.

ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‌ಷನ್ ಸೊಸೈಟಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬಳ್ಳಾರಿ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ವಿಮ್ಸ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ರಾಜ್ಯದ 12 ಎನ್‌ಎಸ್‌ಎಸ್‌ ಘಟಕಗಳು ಈ ಪ್ರಶಸ್ತಿಗೆ ಭಾಜನವಾಗಿವೆ.

ಪ್ರತಿಕ್ರಿಯಿಸಿ (+)