ರಾಯಚೂರು: ಜಿಲ್ಲೆಯಲ್ಲಿ ಈಗಾಗಲೇ ಹತ್ತಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ರೈತರಿಗೂ ಅನುಕೂಲವಾಗುವ ಹಾಗೆ 2025-26ನೇ ಸಾಲಿನ ಎಂಎಸ್ಪಿ ಹತ್ತಿ ಖರೀದಿ ನೋಂದಣಿಗೆ ಡಿಸೆಂಬರ್ 31ರವರೆಗೆ ಕಾಲಾವಕಾಶ ನೀಡಲಾಗಿದ್ದು, ರೈತರು ತರಾತುರಿ ಮಾಡದೇ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ನಿತೀಶ್ ಕೆ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸೋಮವಾರ ರೈತ ಮುಖಂಡರ ಸಭೆ ನಡೆಸಿ ಅವರು ಮಾತನಾಡಿದರು.

‘ದೇವದುರ್ಗ ತಾಲ್ಲೂಕಿನಲ್ಲಿ 5 ಕೇಂದ್ರಗಳು, ಮಾನ್ವಿ, ಸಿಂಧನೂರ, ಸಿರವಾರ ತಾಲ್ಲೂಕಿನಲ್ಲಿ ತಲಾ ಒಂದು ಹತ್ತಿ ಖರೀದಿ ಕೇಂದ್ರಗಳನ್ನು ತೆರೆದು ರೈತರಿಗೆ ಅನುಕೂಲ ಕಲ್ಪಿಸಲಾಗಿದೆ. ಹತ್ತಿ ಮಾರಾಟ ಮಾಡಲು ಇಚ್ಚಿಸುವ ಪ್ರತಿಯೊಬ್ಬ ರೈತರು ತಮ್ಮ ತಮ್ಮ ಮೊಬೈಲ್ನಿಂದಲೇ ನೋಂದಣಿ ಮಾಡಿಕೊಳ್ಳಬೇಕು. ರೈತರು, ಕಪಾಸ್ ಕಿಸಾನ್ ಮೊಬೈಲ್ ಅಪ್ಲಿಕೇಶನ್ ಮೂಲಕ ಮೊದಲು ಡಿಜಿಟಲ್ ನೋಂದಣಿ ಮಾಡಿಕೊಳ್ಳಬೇಕು ಎಂದರು.

ಪ್ರತಿ ದಿನ ಕನಿಷ್ಠ 15,000 ಕ್ವಿಂಟಲ್ನಷ್ಟು ಹತ್ತಿ ಖರೀದಿ ಮಾಡಲು ಮಾತ್ರ ಅವಕಾಶ ಕಲ್ಪಿಸಲಾಗಿದೆ. ಆದರೆ, ಜಿಲ್ಲೆಯಾದ್ಯಂತ ಎಲ್ಲ ರೈತರು ಏಕಕಾಲಕ್ಕೆ ಹತ್ತಿ ಮಾರಾಟಕ್ಕೆ ತರಾತುರಿ ಮಾಡಿದ್ದರಿಂದಾಗಿ ಸ್ಲಾಟ್ ಬುಕ್ಕಿಂಗ್ನಲ್ಲಿ ತಾಂತ್ರಿಕ ಅಡಚಣೆ ಕಾಣಿಸಿತ್ತು. ಅದು ಈಗ ಸರಿಯಾಗಿದೆ. ರೈತರು ಯಾವುದೇ ಕಾರಣಕ್ಕೆ ಆತಂಕ ಪಡಬಾರದು ಎಂದರು.

ತೊಗರಿ ಕೇಂದ್ರ ತೆರೆಯಲು ಕ್ರಮ: ಭತ್ತ ಮತ್ತು ಜೋಳದ ಖರೀದಿ ಕೇಂದ್ರಗಳನ್ನು ತೆರೆದು ಖರೀದಿ ಪ್ರಕ್ರಿಯೆ ನಡೆಸಲಾಗುತ್ತದೆ. ರೈತರ ಬೇಡಿಕೆಯಂತೆ ಜಿಲ್ಲೆಯಲ್ಲಿ ತೊಗರಿ ಖರೀದಿ ಕೇಂದ್ರವನ್ನು ತೆರೆಯಲು ಅನುಮತಿಗಾಗಿ ಸರ್ಕಾರಕ್ಕೆ ಪ್ರಸ್ತಾವ ಕಳುಹಿಸಲಾಗಿದ್ದು, 15 ದಿನಗಳೊಳಗೆ ಮಂಜೂರಾತಿ ಸಿಗಬಹುದಾಗಿದೆ ಎಂದರು.

ಇದುವರೆಗೆ 22,000 ರೈತರಿಂದ ನೋಂದಣಿ: ರಾಯಚೂರು ಜಿಲ್ಲೆಯಲ್ಲಿ ಇದುವರೆಗೆ 22,000 ರೈತರು ನೋಂದಣಿ ಮಾಡಿಸಿದ್ದಾರೆ. ಈ ಪೈಕಿ ಕೃಷಿ ಇಲಾಖೆಯು 13,747 ಜನ ರೈತರಿಗೆ ಅನುಮೋದನೆ ನೀಡಿದೆ. ಇನ್ನುಳಿದ ರೈತರಿಗೆ ಅನುಮೋದನೆ ನೀಡುವ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ 35 ಕ್ವಿಂಟಲ್ನಷ್ಟು ಹತ್ತಿ ಖರೀದಿ ಮಾಡಲಾಗಿದೆ. ಕೇಂದ್ರ ಸರ್ಕಾರವು ಪ್ರತಿ ಕ್ವಿಂಟಲ್ ಹತ್ತಿ ಖರೀದಿಗೆ ₹8,110 ನಿಗದಿ ಮಾಡಿದೆ ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಉಪ ನಿರ್ದೇಶಕ ಬಿ ಕೃಷ್ಣ ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ರೈತ ಸಂಘದ ಚಾಮರಾಜ ಪಾಟೀಲ, ಜಂಟಿ ಕೃಷಿ ನಿರ್ದೇಶಕರಾದ ಚವ್ಹಾಣ್, ರೈತರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.