ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹತ್ತು ವರ್ಷ ಜನರಿಗೆ ಮೋಸ ಮಾಡಿದ ಬಿಜೆಪಿ ತಿರಸ್ಕರಿಸಿ: ಸಚಿವ ಎನ್‌.ಎಸ್‌.ಬೋಸರಾಜು

Published 18 ಏಪ್ರಿಲ್ 2024, 16:05 IST
Last Updated 18 ಏಪ್ರಿಲ್ 2024, 16:05 IST
ಅಕ್ಷರ ಗಾತ್ರ

ರಾಯಚೂರು: ‘ಹತ್ತು ವರ್ಷ ದೇಶದ ಜನರಿಗೆ ಮೋಸ ಮಾಡಿದ ಬಿಜೆಪಿಯನ್ನು ಈ ಚುನಾವಣೆಯಲ್ಲಿ ತಿರಸ್ಕರಿಸಬೇಕು. ಬಡವರ ಪರವಾಗಿರುವ ಕಾಂಗ್ರೆಸ್‌ನ್ನು ಬೆಂಬಲಿಸಬೇಕು‘ ಎಂದು ಸಣ್ಣ ನೀರಾವರಿ ಸಚಿವ ಎನ್‌.ಎಸ್‌.ಬೋಸರಾಜು ಮತದಾರರಿಗೆ ಮನವಿ ಮಾಡಿದರು.

ಕಾಂಗ್ರೆಸ್‌ ಅಭ್ಯರ್ಥಿ ಜಿ.ಕುಮಾರ ನಾಯಕ ನಾಮಪತ್ರ ಸಲ್ಲಿಸುವ ಪೂರ್ವದಲ್ಲಿ ನಗರದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

‘ಜನರಿಗೆ ಸುಳ್ಳು ಭರವಸೆಗಳನ್ನು ಕೊಟ್ಟು ಜನರ ದಾರಿ ತಪ್ಪಿಸುತ್ತ ಬಂದಿದೆ. ನುಡಿದಂತೆ ನಡೆದುಕೊಂಡು ಬಂದಿರುವ ಕಾಂಗ್ರೆಸ್‌ ಪರವಾಗಿ ಮತ ಚಲಾಯಿಸಬೇಕು‘ ಎಂದು ಹೇಳಿದರು.

ಕೆಕೆಆರ್‌ಡಿಬಿ ಅಧ್ಯಕ್ಷ ಅಜಯಸಿಂಗ್‌ ಮಾತನಾಡಿ, ‘ಕಾಂಗ್ರೆಸ್‌ಗೆ ಎಲ್ಲೆಡೆ ವ್ಯಾಪಕ ಬೆಂಬಲ ದೊರೆಯುತ್ತಿದೆ. ಬದಲಾವಣೆ ತರಲು ಕಾಂಗ್ರೆಸ್‌ ಪರ ಮತ ನೀಡಬೇಕು’ ಎಂದು ಮನವಿ ಮಾಡಿದರು.

ಕಾಂಗ್ರೆಸ್‌ ಅಭ್ಯರ್ಥಿ ಜಿ.ಕುಮಾರ ನಾಯಕ ಮಾತನಾಡಿ, ‘ಜನ ಸೇವೆ ಮಾಡಲು ರಾಯಚೂರು ಜಿಲ್ಲೆಯಿಂದ ಅವಕಾಶ ಕೊಡಬೇಕು. ಅಧಿಕಾರಿಯಾಗಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಿರುವೆ. ಜಿಲ್ಲೆಯ ಸಮಸ್ಯೆಗಳು ನನಗೆ ಗೊತ್ತಿವೆ. ರಾಜಕೀಯವಾಗಿ ಕೆಲಸ ಮಾಡಲು ಅವಕಾಶ ನೀಡಬೇಕು‘ ಎಂದು ಕೋರಿದರು.

ನಂತರ ರಾಯಚೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಮಾರ ನಾಯಕ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಪಾಟೀಲ ಇಟಗಿ, ಮಾನವಿ ಶಾಸಕ ಹಂಪಯ್ಯ ಸಾಹುಕಾರ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶಾಂತಪ್ಪಣ್ಣ, ಅಭ್ಯರ್ಥಿಯ ಪತ್ನಿ ಶೀಲಾ, ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT