ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘12 ಕೈದಿಗಳ ಬಿಡುಗಡೆಗೆ ವರದಿ’

Last Updated 29 ಮಾರ್ಚ್ 2020, 15:06 IST
ಅಕ್ಷರ ಗಾತ್ರ

ರಾಯಚೂರು: ಜಿಲ್ಲಾ ಕಾರಾಗೃಹದಲ್ಲಿ ವಿವಿಧ ಪ್ರಕರಣಗಳ ಆರೋಪದ ಮೇರೆಗೆ ಕಳೆದ ಏಳು ವರ್ಷಗಳಿಂದ ಸೆರೆವಾಸ ಅನುಭವಿಸುತ್ತಿರುವ 12 ಖೈದಿಗಳನ್ನು ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುತ್ತದೆ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬೈಲೂರು ಶಂಕರರಾಮ ಹೇಳಿದರು.

ನಗರದ ಜಿಲ್ಲಾ ಕಾರಾಗೃಹಕ್ಕೆ ಭಾನುವಾರ ಭೇಟಿ ನೀಡಿ ಪರಿಶೀಲಿಸಿದರು.

ಕೊರೊನಾ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ, ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು.

ಈಗಾಗಲೇ ಮಹಾರಾಷ್ಟ್ರ ರಾಜ್ಯದಲ್ಲಿ ಅಲ್ಲಿನ ಸರ್ಕಾರ ಸನ್ನಡತೆ ಆಧಾರದ ಮೇಲೆ ಕೈದಿಗಳನ್ನು ಬಿಡುಗಡೆ ಮಾಡಲು ನಿರ್ಧರಿಸಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಸಹ ಕೈದಿಗಳನ್ನು ಬಿಡುಗಡೆ ಮಾಡಲು ಸರ್ಕಾರದಿಂದ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

ಜಿಲ್ಲಾ ಕಾರಾಗೃಹ ಅಧೀಕ್ಷಕ ಅಂದಾನಿ, ಉಪಾಧೀಕ್ಷಕ ಅಬ್ದುಲ್ ಸೂಕೂರು, ವೈದ್ಯ ಡಾ. ವಿಶ್ವನಾಥ ರೆಡ್ಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT