ಶನಿವಾರ, ಸೆಪ್ಟೆಂಬರ್ 18, 2021
21 °C

ವರ್ಗಾವಣೆ ನಿಯಮ ತಿದ್ದುಪಡಿಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಲಿಂಗಸುಗೂರು: ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನೇಮಕಾತಿ ಹೊಂದಿದ್ದಾರೆ. ಅಂತಹ ಶಿಕ್ಷಕರು ಸ್ವಂತ ಜಿಲ್ಲೆಗಳಿಗೆ ವರ್ಗಾವಣೆ ಮಾಡಿಕೊಳ್ಳಲು ಅನುಕೂಲ ಆಗುವ ರೀತಿಯಲ್ಲಿ ವರ್ಗಾವಣೆ ನಿಯಮಗಳ ತಿದ್ದುಪಡಿ ಮಾಡಬೇಕು ಎಂದು ಶಿಕ್ಷಕರು ಆಗ್ರಹಪಡಿಸಿದರು.

ಭಾನುವಾರ ಉಪ ವಿಭಾಗಾಧಿಕಾರಿ ರಾಹುಲ್‍ ಸಂಕನೂರ ಮೂಲಕ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದ ಅವರು, ಈಗಾಗಲೆ 20 ವರ್ಷಕ್ಕೂ ಮೇಲ್ಪಟ್ಟು ವಿವಿಧ ಜಿಲ್ಲೆಗಳಲ್ಲಿ ಸೇವೆ ಸಲ್ಲಿಸುತ್ತ ಬಂದಿದ್ದೇವೆ. ವಯೋವೃದ್ಧ ತಂದೆ ತಾಯಿ, ಸಂಬಂಧಿಕರ ಆರೋಗ್ಯ ಸಂರಕ್ಷಣೆ ಉದ್ದೇಶದಿಂದ ಸ್ವಂತ ಜಿಲ್ಲೆಗೆ ವರ್ಗಾವಣೆ ಮಾಡಿಕೊಳ್ಳಲಾಗದೆ ಸಂಕಷ್ಟ ಎದುರಿಸುತ್ತಿದ್ದೇವೆ ಎಂದು ದೂರಿದರು.

ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಸಂವಿಧಾನದ ಕಲಂ 370(ಜೆ) ಅನುಷ್ಠಾನಗೊಳಿಸಿದ್ದರು ಕೂಡ ನೂರಾರು ಹುದ್ದೆಗಳು ಭರ್ತಿ ಆಗದೆ ಖಾಲಿ ಉಳಿದಿವೆ. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಬೇಕು. ಶಿಕ್ಷಕರ ನೇಮಕಾತಿ, ವರ್ಗಾವಣೆ ಮಾಡದೆ ಗುಣಮಟ್ಟದ ಶಿಕ್ಷಣ ನಿರೀಕ್ಷಿಸುವುದು ನ್ಯಾಯಸಮ್ಮತವಲ್ಲ ಎಂದರು.

ಶಿಕ್ಷಕ ಸಮೂಹದ ಮುಖಂಡರಾದ ಜಗದೀಶ, ಗಿರಿಮಲ್ಲಯ್ಯ ಮಠ, ಮೈಲಾರೆಪ್ಪ, ಗಿರೀಶ, ಶಾಂತೇಶ ವಗ್ಗರ, ನಾಗಭೂಷಣ, ಪ್ರವೀಣ ಪಾಟೀಲ, ಹನುಮಂತಪ್ಪ ಹಾಗೂ ಇತರರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.