ಪ್ಲಾಸ್ಟಿಕ್ ಧ್ವಜ ನಿಷೇಧಿಸಲು ಮನವಿ

7

ಪ್ಲಾಸ್ಟಿಕ್ ಧ್ವಜ ನಿಷೇಧಿಸಲು ಮನವಿ

Published:
Updated:
Deccan Herald

ರಾಯಚೂರು: ಸ್ವಾತಂತ್ರ್ಯೋತ್ಸವ ದಿನದಂದು ಪ್ಲಾಸ್ಟಿಕ್ ರಾಷ್ಟ್ರಧ್ವಜದಿಂದ ಅಪಮಾನ ಆಗುವುದನ್ನು ತಡೆಯಲು ಪ್ಲಾಸ್ಟಿಕ್ ಧ್ವಜಗಳ ಮಾರಾಟವನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿ ಹಿಂದೂ ಜನಜಾಗೃತಿ ಸಮಿತಿ ಸದಸ್ಯರು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಸೋಮವಾರ ಮನವಿ ಸಲ್ಲಿಸಿದರು.

ಸ್ವಾತಂತ್ರ್ಯೋತ್ಸವ ದಿನಾಚರಣೆ ಆಚರಣೆಗೆ ದೇಶದಲ್ಲಿ ಸಿದ್ಧತೆಗಳು ಮಾಡಿಕೊಳ್ಳಲಾಗುತ್ತಿದೆ. ಆದರೆ, ಧ್ವಜಾರೋಹಣದ ನಂತರ ಪ್ಲಾಸ್ಟಿಕ್ ಹಾಗೂ ಕಾಗದದ ಧ್ವಜಗಳನ್ನು ಎಲ್ಲೆಂದರೆಲ್ಲಿ ಬಿಸಾಡುವ ಮೂಲಕ ರಾಷ್ಟ್ರೀಯ ಹಬ್ಬಗಳಿಗೆ ಅಪಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

12 ವರ್ಷಗಳಿಂದ ಪ್ಲಾಸ್ಟಿಕ್ ಧ್ವಜಗಳನ್ನು ನಿಷೇಧಿಸಲು ಜಾಗೃತಿ ಮೂಡಿಸಲಾಗುತ್ತಿದ್ದು, ಪ್ಲಾಸ್ಟಿಕ್ ನಿಷೇಧಿಸಲು ಮನವಿಗಳನ್ನು ಸಲ್ಲಿಸಲಾಗಿದೆ. ಆದರೆ, ಇದುವರೆಗೆ ಇದು ಸಾಧ್ಯವಾಗಿಲ್ಲ. ಆದ್ದರಿಂದ ಕೂಡಲೇ ಪ್ಲಾಸ್ಟಿಕ್ ಧ್ವಜಗಳನ್ನು ಬಳಕೆ ಮಾಡುವುದು ಹಾಗೂ ಮಾರಾಟ ಮಾಡುವುದು ತಡೆಯಲು ಸೂಕ್ತ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಕೃಷ್ಣವೇಣಿ, ಶೋಭಾ, ಬಿ.ವಿಜಯಲಕ್ಷ್ಮೀ, ಸರಳ, ಉಮಾ, ಜಯಪಾಟೀಲ್ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !