ಸವಿತಾ ಮಹರ್ಷಿ ಪುತ್ಥಳಿ ಸ್ಥಾಪನೆಗೆ ಮನವಿ

ಸೋಮವಾರ, ಜೂನ್ 24, 2019
24 °C

ಸವಿತಾ ಮಹರ್ಷಿ ಪುತ್ಥಳಿ ಸ್ಥಾಪನೆಗೆ ಮನವಿ

Published:
Updated:
Prajavani

ರಾಯಚೂರು: ನಗರದಲ್ಲಿ ಸವಿತಾ ಮಹರ್ಷಿ ಪುತ್ಥಳಿಯನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸವಿತಾ ಸಮಾಜ ಜಿಲ್ಲಾ ಘಟಕದ ಸದಸ್ಯರು ಜಿಲ್ಲಾಧಿಕಾರಿಗೆ ಶನಿವಾರ ಮನವಿ ಸಲ್ಲಿಸಿದರು.

ವಿವಿಧ ಸಮಾಜಗಳ ಮಹಾನ್‌ ವ್ಯಕ್ತಿಗಳ ಪುತ್ಥಳಿ ಸ್ಥಾಪನೆ ಮಾಡಲಾಗಿದ್ದು, ಸವಿತಾ ಸಮಾಜದ ಸವಿತಾ ಮಹರ್ಷಿ ಪುತ್ಥಳಿಯನ್ನು ಸ್ಥಾಪನೆ ಮಾಡದಿರುವುದು ಸಮಾಜಕ್ಕೆ ಅನ್ಯಾಯ ಮಾಡಿದಂತಾಗುತ್ತದೆ. ಸರ್ಕಾರದಿಂದ ಜಯಂತಿ ಆಚರಣೆ ಮಾಡಲಾಗುತ್ತದೆ. ಜಯಂತಿ ಸಂದರ್ಭದಲ್ಲಿ ಪುತ್ಥಳಿಗೆ ಪೂಜೆ ಸಲ್ಲಿಸಲು ಅನುಕೂಲವಾಗಲು ಮಾವಿನಕೆರೆಯ ದಡದಲ್ಲಿ ವೀರ ಸಾವರ್ಕರ್‌ ಪುತ್ಥಳಿ ಪಕ್ಕದಲ್ಲಿ ಸ್ಥಾಪಿಸಬೇಕು ಎಂದು ಆಗ್ರಹಿಸಿದರು.

ನಾಗಲದಿನ್ನಿ ಶ್ರೀನಿವಾಸ, ವೆಂಕಟೇಶ ವಲ್ಲೂರು, ಸಿ.ಎ.ಗೋವಿಂದ, ನಾಗರಾಜ, ಇಲಕಲ್ ವೀರೇಶ, ರಮೇಶ, ರಾಮಕೃಷ್ಣ ಮಲಿಗಿವೇಲಿ ಇದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !