ಬುಧವಾರ, 7 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು: ಏಮ್ಸ್ ಮಂಜೂರಾತಿಗಾಗಿ ಮನವಿ

Last Updated 16 ಸೆಪ್ಟೆಂಬರ್ 2020, 14:41 IST
ಅಕ್ಷರ ಗಾತ್ರ

ರಾಯಚೂರು: ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಏಮ್ಸ್)ಅನ್ನು ರಾಯಚೂರು ಜಿಲ್ಲೆಯಲ್ಲಿ ಸ್ಥಾಪನೆ ಮಾಡಬೇಕು ಎಂದು ಒತ್ತಾಯಿಸಿ ರಾಯಚೂರು ಏಮ್ಸ್ ಹೋರಾಟ ಸಮಿತಿ ಪದಾಧಿಕಾರಿಗಳು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್‌ ಮೂಲಕ ಮುಖ್ಯಮಂತ್ರಿಗೆಬುಧವಾರ ಮನವಿ ಸಲ್ಲಿಸಿದರು.

ರಾಜ್ಯದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ ವಿಶೇಷವಾಗಿ ರಾಯಚೂರು ಜಿಲ್ಲೆ ಎಲ್ಲಾ ಕ್ಷೇತ್ರಗಳಲ್ಲಿ ಹಿಂದುಳಿಯಲು ರಾಜಕೀಯ ಇಚ್ಛಾಶಕ್ತಿಯೇ ಕಾರಣವಾಗಿದೆ. ಪ್ರಾದೇಶಿಕ ಅಸಮತೋಲನೆ ನಿವಾರಣೆಗಾಗಿ ಡಾ.ಡಿ.ಎಂ.ನಂಜುಂಡಪ್ಪ ವರದಿಯಂತೆ ರಾಯಚೂರಿನಲ್ಲಿ ಐಐಟಿ ಸ್ಥಾಪಿಸಬೇಕು ಎಂದು ಶಿಫಾರಸು ಮಾಡಿದ್ದರೂ ಸರ್ಕಾರ ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಧಾರವಾಡ ಪಾಲಾಗಿದೆ. ಏಮ್ಸ್ ಮಂಜೂರು ಮಾಡಲು ರಾಜ್ಯಕ್ಕೆ ನಿರ್ಧಾರ ಪ್ರಕಟಿಸಲು ಕೇಂದ್ರ ಸರ್ಕಾರ ಹೇಳಿದ್ದು ರಾಯಚೂರು ಜಿಲ್ಲೆಯ ಹೆಸರು ಸೂಚಿಸಿ ಐಐಟಿ ವಿಚಾರದಲ್ಲಿ ಆಗಿರುವ ಅನ್ಯಾಯ ಸರಿಪಡಿಸಬೇಕು ಎಂದು ಆಗ್ರಹಿಸಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಚಿವ ಸಂಪುಟದ ಸಭೆಯಲ್ಲಿ ತೀರ್ಮಾನ ತೆಗೆದುಕೊಂಡು ಏಮ್ಸ್ ಗೆ ರಾಯಚೂರು ಜಿಲ್ಲೆಯ ಏಕೈಕ ಹೆಸರನ್ನು ಮಾತ್ರ ಶಿಫಾರಸು ಮಾಡಬೇಕು. ಏಮ್ಸ್ ರಾಯಚೂರಿನಲ್ಲಿ ಸ್ಥಾಪಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ರಾಜಕೀಯ ಬದ್ಧತೆ ತೋರಬೇಕು ಎಂದು ಮನವಿ ಮಾಡಿದರು.

ಸಮಿತಿ ಪ್ರಧಾನ ಸಂಚಾಲಕ ಬಸವರಾಜ ಕಳಸ, ಮುಖಂಡರಾದ ರಾಘವೇಂದ್ರ ಕುಷ್ಟಗಿ, ರಜಾಕ ಉಸ್ತಾದ್, ಚಾಮರಸ ಮಾಲಿಪಾಟೀಲ, ರವೀಂದ್ರ ಜಲ್ದಾರ್‌, ಅಶೋಕ ಕುಮಾರ ಜೈನ್, ಹರವಿ ನಾಗನಗೌಡ, ಅಂಬಣ್ಣ ಅರೋಲಿಕರ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT