ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು ವಿವಿಯಲ್ಲಿ ಸ್ಥಳೀಯರಿಗೆ ಉದ್ಯೋಗ ಕೊಡಿ: ಜಿಲ್ಲಾಧಿಕಾರಿಗೆ ಮನವಿ

ಯರಗೇರಾ ಗ್ರಾಮ ಪಂಚಾಯಿತಿ ಸದಸ್ಯರಿಂದ ಮನವಿ
Last Updated 29 ಮೇ 2019, 14:01 IST
ಅಕ್ಷರ ಗಾತ್ರ

ರಾಯಚೂರು: ಗುಲಬರ್ಗಾ ವಿಶ್ವವಿದ್ಯಾಲಯದಿಂದ ಬೇರ್ಪಡಿಸಿ ಹೊಸದಾಗಿ ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಆರಂಭಗೊಳ್ಳಲಿರುವ ರಾಯಚೂರು ವಿಶ್ವವಿದ್ಯಾಲಯದ ಆಡಳಿತದಲ್ಲಿ ಸ್ಥಳೀಯ ಯರಗೇರಾ ಹಾಗೂ ಸುತ್ತಲಿನ ಗ್ರಾಮಗಳ ಯುವ ಸಮುದಾಯಕ್ಕೆ ಉದ್ಯೋಗ ಕಲ್ಪಿಸಬೇಕು ಎಂದು ಗ್ರಾಮ ಪಂಚಾಯಿತಿ ಸದಸ್ಯರು ಜಿಲ್ಲಾಧಿಕಾರಿಗೆ ಬುಧವಾರ ಮನವಿ ಸಲ್ಲಿಸಿದರು.

ತಾಲ್ಲೂಕಿನ ಯರಗೇರಾದಲ್ಲಿರುವ ಗುಲಬರ್ಗಾ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರವನ್ನು ರಾಯಚೂರು ವಿಶ್ವವಿದ್ಯಾಲಯವನ್ನಾಗಿ ಸ್ಥಾಪನೆ ಮಾಡುತ್ತಿರುವುದು ಜಿಲ್ಲೆಯ ಶೈಕ್ಷಣಿಕ ಹಿತದೃಷ್ಟಿಯಿಂದ ಒಳ್ಳೆಯ ಬೆಳವಣಿಗೆಯಾಗಿದೆ. ಈ ಕೇಂದ್ರಕ್ಕೆ 30 ವರ್ಷಗಳ ಹಿಂದೆ 250 ಎಕರೆಗೆ ಜಮೀನು ನೀಡಲಾಗಿದೆ. ಆದ್ದರಿಂದ ಹುದ್ದೆಗಳ ನೇಮಕಾತಿಯಲ್ಲಿ ಯರಗೇರಾ ಸುತ್ತಲಿನ ಯುವಕ ಯುವತಿಯರಿಗೆ ಪ್ರಾತಿನಿಧ್ಯ ನೀಡುವ ಮೂಲಕ ಸ್ಥಳೀಯರ ಹಕ್ಕುಗಳನ್ನು ರಕ್ಷಿಸಬೇಕು ಎಂದು ಆಗ್ರಹಿಸಿದರು.

ರಾಯಚೂರು ವಿಶ್ವವಿದ್ಯಾಲಯದಲ್ಲಿ ಮುಂದಿನ ದಿನಗಳಲ್ಲಿ ನೇಮಕಾತಿ ಮಾಡಿಕೊಳ್ಳುವ ಕಾಯಂ ಹಾಗೂ ಹೊರ ಗುತ್ತಿಗೆಯ ಸಿ ಮತ್ತು ಡಿ ವೃಂದದ ಹುದ್ದೆಗಳಿಗೆ ಸ್ಥಳೀಯರಿಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.

ಪಂಚಾಯಿತಿ ಅಧ್ಯಕ್ಷೆ ಮಂಗಮ್ಮ, ಸದಸ್ಯರಾದ ಸುಶೀಲಮ್ಮ, ಮೊಹಮ್ಮದ್ ಅಜೀಜ್, ವೆಂಕಟೇಶ್, ಅಸ್ಮತ್‌ಬೇಗಂ, ಹನುಮಂತ, ಮಲ್ಲೇಶ, ಮಹಮ್ಮದ್ ರಫಿ, ಪಾರ್ವತಿ, ಮಹಾದೇವಮ್ಮ, ನರಸಿಂಹ, ನರಸಿಂಹಲು ನಾಯಕ, ಸೀಮಾನ್, ಲಕ್ಷ್ಮಿ ತಾಯಪ್ಪ, ಮುನಿಯಮ್ಮ, ನರಸಿಂಹ, ವೀರೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT