ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಶೋಧನಾ ವಿಧಾನ: ವಿಚಾರಗೋಷ್ಠಿ

Published 3 ಜನವರಿ 2024, 14:21 IST
Last Updated 3 ಜನವರಿ 2024, 14:21 IST
ಅಕ್ಷರ ಗಾತ್ರ

ರಾಯಚೂರು: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ 2023–24ನೇ ಸಾಲಿಗೆ ಪ್ರವೇಶ ಪಡೆದ ವಿದ್ಯಾರ್ಥಿನಿಯರಿಗೆ ಸಂಶೋಧನಾ ವಿಧಾನ ಕುರಿತು ವಿಚಾರಗೋಷ್ಠಿ ಏರ್ಪಡಿಸಲಾಗಿತ್ತು.

ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಯೇಸಪ್ಪ ಎಲ್‌ ಉಪನ್ಯಾಸ ನೀಡಿದರು. ಪ್ರಾಚಾರ್ಯೆ ಪುಷ್ಪಾ ಅಧ್ಯಕ್ಷತೆ ವಹಿಸಿದ್ದರು. ಐಕ್ಯೂಎಸಿ ಸಂಚಾಲಕಿ ಜ್ಯೋತಿ ಸಿ.ಕೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ಸುಗುಣ ಬಸವರಾಜ, ಶರಣಗೌಡ, ಪ್ರಸನ್ನ ಕುಮಾರ್, ಸೈಯದಾ ರಶೀದ್ ಪರ್ವೀನ್, ರಂಗನಾಥ ಬಿಲ್ಲಾರ್, ಉಮಾದೇವಿ, ಸುರೇಶ ಪಾಟೀಲ, ಭೀಮಾಶಂಕರ, ಸ್ವರೂಪಾ ರಾಣಿ, ಸುಮಿತ್ರಾ ಪ್ಯಾಟಿ ಉಪಸ್ಥಿತರಿದ್ದರು.

ಶರಣರ ಜಯಂತಿ: ಜ.5ರಂದು ಸಭೆ

ರಾಯಚೂರು: ಶಿವಯೋಗಿ ಸಿದ್ದರಾಮ ಜಯಂತಿ, ಮಹಾಯೋಗಿ ವೇಮನ ಜಯಂತಿ ಹಾಗೂ ಅಂಬಿಗರ ಚೌಡಯ್ಯ ಜಯಂತಿ ಆಚರಣೆ ಪೂರ್ವಭಾವಿ ಸಿದ್ಥತಾ ಸಭೆ ಜ.5ರಂದು ಬೆಳಿಗ್ಗೆ 10.30ಕ್ಕೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯಶಸ್ವಿನಿ: ನೋಂದಣಿ ಆರಂಭ

ರಾಯಚೂರು: ಯಶಸ್ವಿನಿ ಸಹಕಾರಿಗಳ ಆರೋಗ್ಯ ರಕ್ಷಣಾ ಯೋಜನೆಯಡಿ ನೋಂದಣಿ ಪ್ರಾರಂಭವಾಗಿದೆ.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ, ಪಿಕಾರ್ಡ್ ಬ್ಯಾಂಕ್, ಹಾಲು ಉತ್ಪಾದಕರ ಸಹಕಾರ ಸಂಘ, ಟಿಎಪಿಸಿಎಂಎಸ್‌ಗಳ ಹಾಗೂ ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959ರಡಿ ಅಥವಾ ಕರ್ನಾಟಕ ಸೌಹಾರ್ದ ಸಹಕಾರಿಗಳ ಕಾಯ್ದೆಯಡಿ ನೋಂದಾಯಿತ ಸಹಕಾರ ಸಂಘಗಳ ಸದಸ್ಯರು ನೋಂದಣಿಗೆ ಅರ್ಹರಾಗಿದ್ದಾರೆ.

ಹೆಚ್ಚಿನ ಮಾಹಿತಿಗೆ ಸ್ಥಳೀಯ ಸಹಕಾರ ಸಂಘಗಳು ಹಾಗೂ ಸಹಕಾರ ಇಲಾಖಾ ಕಚೇರಿಗಳಿಗೆ ಖುದ್ದಾಗಿ ಹಾಗೂ ದೂರವಾಣಿ ಮೂಲಕ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT