ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಜನರ ಸಮಸ್ಯೆಗಳಿಗೆ ಸ್ಪಂದಿಸಿ’

ಕಣ್ಣೂರಿನಲ್ಲಿ ಅಧಿಕಾರಿಗಳ‌ ಗ್ರಾಮ ವಾಸ್ತವ್ಯ
Last Updated 19 ಫೆಬ್ರುವರಿ 2022, 11:52 IST
ಅಕ್ಷರ ಗಾತ್ರ

ಮಸ್ಕಿ: ಗ್ರಾಮೀಣ ಭಾಗದ ಜನರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ದೊರೆಯಬೇಕು ಎಂಬ ಉದ್ದೇಶದಿಂದ ಸರ್ಕಾರ ಜಾರಿಗೆ ತಂದಿರುವ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡಬೇಕು ಎಂದು ಶಾಸಕ ಆರ್.ಬಸನಗೌಡ ಕರೆ ನೀಡಿದರು.

ತಾಲ್ಲೂಕಿನ ಕಣ್ಣೂರು ಗ್ರಾಮದಲ್ಲಿ ಶುಕ್ರವಾರ ತಾಲ್ಲೂಕು ಆಡಳಿತ ಏರ್ಪಡಿಸಿದ್ದ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಚಾಲನೆ‌ ನೀಡಿ ಅವರು ಮಾತನಾಡಿದರು.

‘ಗ್ರಾಮ ವಾಸ್ತವ್ಯ ಒಂದು ಉತ್ತಮ ಕಾರ್ಯಕ್ರಮ, ತಾಲ್ಲೂಕಿನ ಎಲ್ಲಾ ಇಲಾಖೆಗಳ ಅಧಿಕಾರಿಗಳು ಗ್ರಾಮದಲ್ಲಿಯೇ ವಾಸ್ತವ್ಯ ಹೂಡಿ ವಿವಿಧ ಯೋಜನೆಗಳನ್ನು ಜನರಿಗೆ, ಕಡು ಬಡವರಿಗೆ ನ್ಯಾಯಯುತವಾಗಿ ತಲುಪಿಸಬೇಕು, ಜನ ಸಾಮಾನ್ಯರು ಕೆಲಸ ಕಾರ್ಯಗಳಿಗೆ ಕಚೇರಿಗೆ ಬಂದಾಗ ಗೊಳಾಡಿಸದೇ ಅವರ ಕೆಲಸ ಮಾಡುವ ಮೂಲಕ ಯೋಜನಗಳ ಲಾಭ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು’ ಎಂದರು.

ಸಹಾಯಕ ಆಯುಕ್ತ ‌ರಾಹುಲ್ ಶರಣಪ್ಪ ಸಂಕನಾಳ ಮಾತನಾಡಿ, ಜನ ಸಾಮಾನ್ಯರ ಮನೆ ಬಾಗಿಲಿಗೆ ಸರ್ಕಾರಿ ಆಡಳಿತ ಎಂಬ ಕಲ್ಪನೆಯೊಂದಿಗೆ ಸರ್ಕಾರ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಎಂಬ ವಿನೂತನ ಕಾರ್ಯಕ್ರಮ ಹಾಕಿಕೊಂಡಿದೆ. ಇಡೀ ದಿನ ತಾಲ್ಲೂಕಿನ ಎಲ್ಲಾ ಇಲಾಖೆ ಅಧಿಕಾರಿಗಳು ಗ್ರಾಮದಲ್ಲಿಯೇ ವಾಸ್ತವ್ಯ ಮಾಡಿ ಜನರ ಸಮಸ್ಯೆಗಳಿಗೆ ಪರಿಹಾರ ನೀಡಲಿದ್ದಾರೆ. ಸಾರ್ವಜನಿಕರು, ರೈತರು ಈ ಕಾರ್ಯಕ್ರಮದ ಲಾಭ ಪಡೆಯಬೇಕು ಎಂದರು‌.

ತಹಶೀಲ್ದಾರ್ ಕವಿತಾ ಆರ್. ಸ್ವಾಗತಿಸಿದರು. ತಾ.ಪಂ. ಇಒ ಬಾಬು ರಾಠೋಡ್, ಗ್ರಾಮ ಪಂಚಾಯತಿ ಅಧ್ಯಕ್ಷೆ ಹುಲಗಮ್ಮ ಸೇರಿದಂತೆ ಪಂಚಾಯಿತಿ ಸದಸ್ಯರು, ಅಧಿಕಾರಿಗಳು ಭಾಗವಹಿಸಿದ್ದರು.

ಪಿಂಚಣಿ, ಭಾಗ್ಯಲಕ್ಷ್ಮೀ ಬಾಂಡ್ ಸೇರಿದಂತೆ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಶಾಸಕ ಆರ್. ಬಸನಗೌಡ ಬಾಂಡ್ ವಿತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT