ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿವೃತ್ತ ಐಎಎಸ್‌ ಅಧಿಕಾರಿಗಿಂತ ಪತ್ನಿಯೇ ಶ್ರೀಮಂತೆ

Published 17 ಏಪ್ರಿಲ್ 2024, 15:48 IST
Last Updated 17 ಏಪ್ರಿಲ್ 2024, 15:48 IST
ಅಕ್ಷರ ಗಾತ್ರ

ರಾಯಚೂರು: ರಾಯಚೂರು ಲೋಕಸಭಾ (ಪರಿಶಿಷ್ಟ ಪಂಗಡದ ಮೀಸಲು) ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ನಿವೃತ್ತ ಐಎಎಸ್‌ ಅಧಿಕಾರಿ ಜಿ.ಕುಮಾರ ನಾಯಕ ಅವರಿಗಿಂತ ಅವರ ಪತ್ನಿ ಶೀಲಾ ಕುಮಾರ ಅವರೇ ಅಧಿಕ ಆಸ್ತಿ ಹೊಂದಿದ್ದಾರೆ.

ಜಿ.ಕುಮಾರ ನಾಯಕ ₹ 1.72 ಕೋಟಿ ಮೌಲ್ಯದ ಚರಾಸ್ತಿ, ₹ 2.40 ಕೋಟಿ ಮೌಲ್ಯದ ಸ್ಥಿರಾಸ್ತಿ ಹೊಂದಿದ್ದರೆ, ಪತ್ನಿ ₹ 2.27 ಕೋಟಿ ಮೌಲ್ಯದ ಚರಾಸ್ತಿ ಮತ್ತು ₹ 26.70 ಕೋಟಿ ಮೌಲ್ಯದ ಸ್ಥಿರಾಸ್ಥಿ ಹೊಂದಿದ್ದಾರೆ. ವಿವಿಧ ಹಣಕಾಸು ಸಂಸ್ಥೆಗಳಿಂದ ₹5.04 ಕೋಟಿ ಸಾಲ ಪಡೆದಿದ್ದಾರೆ. ಕುಮಾರ ನಾಯಕ ಬಳಿ 20 ತೊಲ ಚಿನ್ನ ಹಾಗೂ ಶೀಲಾ ಕುಮಾರ ಬಳಿ 72.05 ತೊಲ ಚಿನ್ನ ಇದೆ ಎಂದು ಪ್ರಮಾಣಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಐಎಎಸ್‌ 1990ರ ಕೇಡರ್‌ ಅಧಿಕಾರಿಯಾಗಿದ್ದ ಇವರು, ರಾಯಚೂರು ಜಿಲ್ಲಾಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಮೊದಲ ಬಾರಿಗೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT