ಸೋಮವಾರ, 9 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಯಚೂರು | ರಸ್ತೆ ಅಪಘಾತ: ಲಾರಿ ಕ್ಲೀನರ್ ಸಾವು

Published 6 ಸೆಪ್ಟೆಂಬರ್ 2024, 6:42 IST
Last Updated 6 ಸೆಪ್ಟೆಂಬರ್ 2024, 6:42 IST
ಅಕ್ಷರ ಗಾತ್ರ

ಶಕ್ತಿನಗರ (ರಾಯಚೂರು): ರಾಯಚೂರು ತಾಲ್ಲೂಕಿನ ಚಿಕ್ಕಸೂಗೂರು ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಎರಡು ಲಾರಿಗಳ ಮಧ್ಯೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕ್ಲೀನರ್ ಒಬ್ಬರು ಮೃತಪಟ್ಟಿದ್ದಾರೆ.

ಓವರ್ ಟೇಕ್ ಮಾಡಲು ಹೋಗಿ ತರಕಾರಿ ಹೊತ್ತೊಯ್ಯುತ್ತಿದ್ದ ಹೊಸಪೇಟೆ ಮೂಲದ ತರಕಾರಿ ಲಾರಿ , ಎದುರಿಗೆ ಬರುತ್ತಿದ್ದ ಲಾರಿಗೆ ಢಿಕ್ಕಿ ಹೊಡೆದಿದೆ. ತರಕಾರಿ ಲಾರಿಯಲ್ಲಿದ್ದ ಕ್ಲೀನರ್ ಗಂಭೀರವಾಗಿ ಗಾಯಗೊಂಡು ರಿಮ್ಸ್ ಆಸ್ಪತ್ರೆಗೆ ಸಾಗಿಸುವಾಗ ಕೊನೆಯುಸಿರೆಳೆದಿದ್ದಾರೆ. ತರಕಾರಿ ಲಾರಿ ಸಂಪೂರ್ಣ ನುಜ್ಜುಗುಜ್ಜಾಗಿದೆ.

ಅಪಘಾತದಿಂದಾಗಿ ಕೆಲ ಕಾಲ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿತ್ತು. ರಾಯಚೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಲಾರಿ ತೆರವುಗೊಳಿಸಿ ವಾಹನಗಳ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT