ಮಂಗಳವಾರ, ಜೂನ್ 28, 2022
21 °C

ಗಲಗ: ಹದಗೆಟ್ಟ ರಸ್ತೆ ದುರಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗಲಗ (ಜಾಲಹಳ್ಳಿ): ಇಲ್ಲಿಗೆ ಸಮೀಪದ ಗಲಗ ಗ್ರಾಮದ ವಾರ್ಡ್ ಸಂಖ್ಯೆ 3 ರಲ್ಲಿ ಹದಗೆಟ್ಟ ರಸ್ತೆಯನ್ನು ದುರಸ್ತಿ ಮಾಡಲಾಯಿತು.

ಅಂಬಿಗರ ಚೌಡಯ್ಯ ವೃತ್ತದಿಂದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದವರೆಗೆ ರಸ್ತೆ ಹದಗೆಟ್ಟಿತ್ತು.

ಗ್ರಾ.ಪಂ ವತಿಯಿಂದ ಶನಿವಾರ ಮರಂ ಹಾಕಿ ಗುಂಡಿ ಮುಚ್ಚಲಾಯಿತು. ಈ ಕೆಲಸಕ್ಕೆ ಗ್ರಾ.ಪಂ ಸದಸ್ಯರೂ ಕೈ‌ ಜೋಡಿಸಿದರು.

ಈ ರಸ್ತೆಯಲ್ಲಿ ಚರಂಡಿ ನೀರು ಹರಿಯುತ್ತಿತ್ತು. ಸಾರ್ವಜನಿಕರ ಸಂಚಾರಕ್ಕೆ ತೊಂದರೆ‌ ಉಂಟಾಗಿತ್ತು. ರೋಗಿಗಳನ್ನು ಆಸ್ಪತ್ರೆಗೆ ಕರೆತರಲು ಜನ ಹರಸಾಹಸ ಪಡುತ್ತಿದ್ದರು. ಗ್ರಾಮ ಪಂಚಾಯಿತಿ ಸದಸ್ಯರ ಈ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಗ್ರಾಮದಲ್ಲಿ ಸ್ವಚ್ಚತೆ ಮರೀಚಿಕೆಯಾಗಿ ಸಾಂಕ್ರಾಮಿಕ ರೋಗ ಭೀತಿ ಎದುರಾಗಿತ್ತು. ಈಗಾಗಲೇ ಕೊರೊನಾ ಸೋಂಕಿನಿಂದ ಐವರು ಮೃತಪಟ್ಟಿದ್ದಾರೆ. ನಿಯಂತ್ರಣಕ್ಕೆ ಬರುತ್ತಿಲ್ಲ. ನಿತ್ಯ ಒಬ್ಬರಲ್ಲಿ ಸೋಂಕು ಲಕ್ಷಣಗಳು ಕಂಡುಬರುತ್ತಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು