ರಾಯಚೂರು: ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ, ಎನ್ಎಚ್ಎಐ ಪ್ರಾದೇಶಿಕ ಕಚೇರಿ ಹಾಗೂ ಆದಿಕವಿ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಆಶ್ರಯದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸದ ಅಂಗವಾಗಿ ಜಾಗೃತಿ ಅಭಿಯಾನ ನಡೆಸಲಾಯಿತು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ರಾಯಚೂರಿನ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತವಾಗಿ ಹೆಲ್ಮೆಟ್ಗಳನ್ನು ವಿತರಿಸಲಾಯಿತು.

ಜಿಲ್ಲಾಧಿಕಾರಿ ನಿತೀಶ್ ಕೆ. ಮಾತನಾಡಿ,‘ವಿದ್ಯಾರ್ಥಿಗಳು ಸಂಚಾರ ನಿಯಮಗಳನ್ನು ಪಾಲಿಸಬೇಕು. ಹೆಲ್ಮೆಟ್ನ ಮಹತ್ವವನ್ನು ಅರಿಯಬೇಕು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಡೆಯಿಂದ ಜಿಲ್ಲೆಯ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಹೆಲ್ಮೆಟ್ ಅನ್ನು ಉಚಿತವಾಗಿ ನೀಡಲಾಗಿದೆ. ಅದನ್ನು ಸರಿಯಾಗಿ ಬಳಕೆ ಮಾಡಿಕೊಳ್ಳಬೇಕು’ ಎಂದು ಹೇಳಿದರು.

‘ನಗರದಲ್ಲಿ ಹೆದ್ದಾರಿ ಹಾದು ಹೋಗಿರುವುದರಿಂದ ಲಾರಿ, ಟಿಪ್ಪರ್, ಭಾರಿ ವಾಹನಗಳ ಸಂಚಾರ ಅಧಿಕವಾಗಿರುತ್ತದೆ. ಸಂಚಾರ ಒತ್ತಡವೂ ಇರುತ್ತದೆ. ಸಂಚಾರ ನಿಯಮಗಳನ್ನು ಸರಿಯಾಗಿ ಪಾಲನೆ ಮಾಡದ ಕಾರಣಕ್ಕಾಗಿ ಅಪಘಾತಗಳು ಹಾಗೂ ಸಾವು ಸಂಭವಿಸುತ್ತಿವೆ’ ಎಂದರು.

‘ಕಳೆದು ಹೋದ ಜೀವ ಯಾವತ್ತಿಗೂ ಬರುವುದಿಲ್ಲ. ಕುಟುಂಬದ ಆಧಾರವಾಗಿರುವ ತಾವುಗಳು ವಾಹನ ಚಾಲನೆ ಮಾಡುವಾಗ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು’ ಎಂದು ಹೇಳಿದರು.

ಹಿರಿಯ ಶ್ರೇಣಿ ಸೆಷನ್ಸ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್.ಎ.ಸಾತ್ವಿಕ್ ಮಾತನಾಡಿ, ‘ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ 500 ಹೆಲ್ಮೆಟ್ ವಿತರಣೆ ಮಾಡುತ್ತಿದ್ದು, ಹಲ್ಮೆಟ್ ಪಡೆದವರು ಕಡ್ಡಾಯವಾಗಿ ಧರಿಸಬೇಕು. ಹೆಲ್ಮೆಟ್ ಪಡೆದವರ ಹೆಸರು ಮತ್ತು ವಿಳಾಸ ನಮೂದಿಸಿಕೊಂಡಿದ್ದು, ಹೆಲ್ಮೆಟ್ ಇಲ್ಲದೆ ಸಂಚಾರ ಮಾಡಿದ ಸಂದರ್ಭದಲ್ಲಿ ಪೊಲೀಸರ ಕೈಗೆ ಸಿಕ್ಕಲ್ಲಿ ಹೆಲ್ಮೆಟ್ ಹಾಕದೇ ಇರುವುದಕ್ಕೆ ದಂಡದ ಜೊತೆಗೆ ಹೆಲ್ಮೆಟ್ ಪಡೆದುಕೊಂಡು ಹಾಕದೇ ಇರುವುದಕ್ಕೆ ಮತ್ತೊಂದು ದಂಡ ಹಾಕಲಾಗುವುದು’ ಎಂದು ಎಚ್ಚರಿಸಿದರು.

ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮೊಹೊಪಾತ್ರ ಮಾತನಾಡಿ, ‘ರಸ್ತೆ ಅಪಘಾತದಲ್ಲಿ ಹೆಲ್ಮೆಟ್ ಇಲ್ಲದೇ ಜೀವ ಕಳೆದುಕೊಳ್ಳುವುದು ಹೆಚ್ಚಿದೆ. ರಸ್ತೆ ಸಂಚಾರದ ಸಮಯದಲ್ಲಿ ಯುವಕರು ಹೆಚ್ಚಾಗಿ ಬೈಕ್ ವೀಲಿಂಗ್ ಮಾಡುತ್ತಿರುವುದು ಗಮನಿಸಿದ್ದೇನೆ. ಇದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಖುಷಿ ಪಡುತ್ತಿದ್ದಾರೆ. ಅಚಾತುರ್ಯ ಉಂಟಾದಲ್ಲಿ ಹೋದ ಜೀವ ಬರುವುದಿಲ್ಲ. ಯುವಕರು ಇಂಥ ಸಾಹಸ ಮಾಡುವುದು ಬಿಡಬೇಕು’ ಎಂದರು.

ಡಿವೈಎಸ್ಪಿ ಶಾಂತವೀರ ಮಾತನಾಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ, ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಭಾವನೇಶ ಕುಮಾರ ಗುಪ್ತಾ, ಆದಿಕವಿ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಪ್ರಭಾರ ರಿಜಿಸ್ಟರ್ ಗುರುರಾಜ ಬಿರಾದಾರ, ಸಿಒಎಲ್ ಯೋಜನಾ ನಿರ್ದೇಶಕ ಎಂ.ಡಿ.ಯುಸೂಫ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.