ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆ ಸುರಕ್ಷತೆಗೆ ಜಾಗೃತಿ ವಹಿಸಿ: ಜಿಲ್ಲಾಧಿಕಾರಿ

ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಸೂಚನೆ
Last Updated 7 ಏಪ್ರಿಲ್ 2022, 14:15 IST
ಅಕ್ಷರ ಗಾತ್ರ

ರಾಯಚೂರು: ರಸ್ತೆ ಸುರಕ್ಷತಾ ಕ್ರಮಗಳ ಬಗ್ಗೆ ಹಲವು ಕಾನೂನು ಇದ್ದು, ಅವುಗಳ ನಿರ್ದೇಶನಗಳಂತೆ ಜಿಲ್ಲೆಯಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಹೆಚ್ಚಿನ ಜಾಗೃತಿ ವಹಿಸುವ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಡಾ.ಅವಿನಾಶ್ ರಾಜೇಂದ್ರ ಮೆನನ್ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಜಿಲ್ಲಾಮಟ್ಟದ ರಸ್ತೆ ಸುರಕ್ಷತಾ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಾದ್ಯಂತ ಎಲ್ಲಾ ಪ್ರಮುಖ ರಸ್ತೆಗಳಲ್ಲಿ ಸುರಕ್ಷತಾ ನಿಯಮಗಳ ಬಗ್ಗೆ ಮಾಹಿತಿ ನೀಡುವ ಪ್ರದರ್ಶನ ಫಲಕಗಳನ್ನು ಹಾಗೂ ಅಗತ್ಯವಿರುವ ಕಡೆಗಳಲ್ಲಿ ಸೂಚನಾ ಫಲಕ ಅಳವಡಿಸಬೇಕು. ನಿರಂತರವಾಗಿ ಅರಿವಿನ ಚಟುವಟಿಕೆಗಳು ನಡೆಯಬೇಕು ಎಂದು ತಿಳಿಸಿದರು.

ಅನಗತ್ಯ ರಸ್ತೆ ಉಬ್ಬುಗಳನ್ನು ತೆಗೆಯುವುದು, ಅಪಾಯಕಾರಿಯಾಗಿರುವ ಹಾಗೂ ಹೆಚ್ಚು ಅಪಘಾತಗಳು ನಡೆದಿರುವ ಸ್ಥಳಗಳಲ್ಲಿ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಬೇಕು. ಡ್ರೈನೇಜ್‌ಗಳ ಅಳವಡಿಕೆ ಹಾಗೂ ರಸ್ತೆ ಸುರಕ್ಷತಾ ಕ್ರಮಗಳಿಗೆ ಅಗತ್ಯವಿರುವ ಅನುದಾನದ ಬಗ್ಗೆ ಪ್ರಸ್ತಾವನೆಗಳನ್ನು ಸಲ್ಲಿಸಬೇಕು ಎಂದು ಹೇಳಿದರು.

ಪಾದಚಾರಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ರಸ್ತೆ ಅಭಿವೃದ್ಧಿ ಮಾಡಬೇಕು. ರಸ್ತೆಯ ಅಗಲೀಕರಣ ಕೆಲಸದಲ್ಲಿ ನಿರತರಾದ ಕಾರ್ಮಿಕರಿಗೆ ಅಪಘಾತ ಉಂಟಾಗುವ ಸಂಭವವಿದ್ದು, ಅಂತಹ ಸ್ಥಳಗಳಲ್ಲಿ ಸೂಕ್ತ ಸೂಚನಾ ಫಲಕಗಳು ಹಾಕಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ಮಾತನಾಡಿ, ವಾಹನಗಳ ವೇಗದ ಮಿತಿಯನ್ನು ನಿಯಂತ್ರಿಸುವ ರೀತಿಯಲ್ಲಿ ತಪಾಸಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕು. ಜಿಲ್ಲೆಯಲ್ಲಿ ರಸ್ತೆ ಅಪಘಾತ ನಿಯಂತ್ರಣ ಹಿನ್ನೆಲೆಯಲ್ಲಿ ಶಾಲಾ ಮಕ್ಕಳನ್ನು ಆಟೋರಿಕ್ಷಾ ವಾಹನಗಳಲ್ಲಿ ಆಸನ ಸಾಮರ್ಥ್ಯಕ್ಕಿಂತ ಹೆಚ್ಚಿನ ಮಕ್ಕಳನ್ನು ಸಾಗಿಸುವುದು ಮತ್ತು ಸರಕು ಸಾಗಾಣಿಕೆ ವಾಹನಗಳಲ್ಲಿ ಕಾರ್ಮಿಕರನ್ನು ಸಾಗಿಸುವುದು ಮಧ್ಯಪಾನ ಸೇವಿಸಿ ಚಾಲನೆ, ಮೊಬೈಲ್ ಬಳಕೆ, ವಿಶೇಷ ಪ್ರವರ್ತನ ಕಾರ್ಯ ಕೈಗೊಳ್ಳಬೇಕು ಎಂದು ತಿಳಿಸಿದರು.

ಪ್ರಾದೇಶಿಕ ಸಾರಿಗೆ ಅಧಿಕಾರಿ ವಿನಯಾ ಕಾಟೋಕರ್, ಅಬಕಾರಿ ಇಲಾಖೆಯ ಉಪ ಆಯುಕ್ತ ವಿಜಯಲಕ್ಷ್ಮಿ, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಸಹಾಯಕ ನಿರ್ದೇಶಕ ಕಿರಣ್ ಕುಮಾರ್ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT