3
ಕೊಟೇಕಲ್‌: ₹ 65 ಲಕ್ಷ ವೆಚ್ಚದ ಕಾಮಗಾರಿ

ರಸ್ತೆ ಚರಂಡಿ ಕಾಮಗಾರಿ ಕಳಪೆ: ಆರೋಪ

Published:
Updated:
ಕವಿತಾಳ ಸಮೀಪದ ಕೊಟೇಕಲ್ ಗ್ರಾಮದಲ್ಲಿ ಕೈಗೊಂಡ ಕಾಂಕ್ರೀಟ್ ರಸ್ತೆ ಕಾಮಗಾರಿಯಲ್ಲಿ ಕಂಕರ್ ಹರಡಿರುವುದು.

ಕವಿತಾಳ: ಸಮೀಪದ ಕೊಟೇಕಲ್ ಗ್ರಾಮದಲ್ಲಿ ಕೈಗೊಂಡ ಕಾಂಕ್ರೀಟ್ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

‘ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭಿವೃದ್ಧಿ ಅನುದಾನದದಡಿ ಅಂದಾಜು ₹ 65 ಲಕ್ಷ ವೆಚ್ಚದಲ್ಲಿ ಕೈಗೊಂಡ ಕಾಂಕ್ರೀಟ್ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿ ಕಳಪೆಯಾಗಿದೆ. ಇದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ’ ಎಂದು ಬಿಜೆಪಿ ರೈತ ಮೋರ್ಚಾ ಕಾರ್ಯಕಾರಿ ಸಮಿತಿ ಸದಸ್ಯ ಶಿವಕುಮಾರ ಪಾಟೀಲ ವಟಗಲ್ ದೂರಿದ್ದಾರೆ.

ಅಂದಾಜು 1200 ಜನಸಂಖ್ಯೆ ಮತ್ತು 500 ಮತದಾರರು ಇರುವ ಗ್ರಾಮದಲ್ಲಿ ವಿವಿಧ ಯೋಜನೆಗಳಡಿ ಈಗಾಗಲೇ ಕಾಂಕ್ರೀಟ್ ರಸ್ತೆ ನಿರ್ಮಿಸಲಾಗಿದೆ. ಸದರಿ ಕಾಮಗಾರಿ ಕೈಗೊಳ್ಳಲು ಹೆಚ್ಚಿನ ಸ್ಥಳಾವಕಾಶ ಇರದಿದ್ದರೂ ಸರ್ಕಾರದ  ಹಣ ದುರುಪಯೋಗ ಪಡಿಸಿಕೊಳ್ಳಲು ಕಾಮಗಾರಿ ಕೈಗೊಳ್ಳಲಾಗಿದೆ’ ಎಂದು ತಿಳಿಸಿದ್ದಾರೆ.

‘ಗ್ರಾಮದಲ್ಲಿ ವಿವಿಧ ಯೋಜನೆಗಳಡಿ ಈಗಾಗಲೇ ನಿರ್ಮಿಸಲಾದ ಕಾಂಕ್ರೀಟ್ ರಸ್ತೆಗಳ ಮೇಲೆ ಮತ್ತೊಮ್ಮೆ ರಸ್ತೆ ನಿರ್ಮಿಸಲಾಗುತ್ತಿದೆ. ಅವೈಜ್ಞಾನಿಕವಾಗಿ ಚರಂಡಿ ನಿರ್ಮಾಣ ಕೈಗೊಳ್ಳಲಾಗಿದ್ದು, ಕಡಿಮೆ ಗುಣಮಟ್ಟದ ಮರಳು ಮತ್ತು ಕಬ್ಬಿಣ ಬಳಕೆ ಮಾಡಲಾಗುತ್ತಿದೆ. ಜಿಲ್ಲಾಧಿಕಾರಿಯವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !