ರಾಯಚೂರು: ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆಗೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಯೋಜನಾ ನಿರ್ದೇಶಕ ಡಾ.ಪಿ. ರಮೇಶಬಾಬು, ಕೃಷ್ಣಕುಮಾರಿ ಹಾಗೂ ರಾಮಬಾಬು ಅವರನ್ನೊಳಗೊಂಡ ತಂಡವು ಜಿಲ್ಲೆಗೆ ಆಗಮಿಸಿದೆ.

ಇಲ್ಲಿಯ ಜಿಲ್ಲಾ ಪಂಚಾಯಿತಿ ಜಲ ನಿರ್ಮಲ ಸಭಾಂಗಣದಲ್ಲಿ ಸಭೆ ನಡೆಸಿ ನರೇಗಾ, ಎನ್ಆರ್ಎಲ್ಎಂ, ಪಿ.ಎಂ.ಎ.ವೈ.ಜಿ, ಎನ್.ಎಸ್.ಎ.ಪಿ ಮತ್ತು ಐಡ್ಬ್ಲೂ.ಎಂಪಿ ಯೋಜನೆಯ ಕಾಮಗಾರಿ ಕಡತಗಳ ನಿರ್ವಹಣೆ, ಒಗ್ಗೂಡಿಸುವಿಕೆ ಕಾಮಗಾರಿಗಳ ಪರಿಶೀಲನೆ ನಡೆಸಲಾಗುವುದು ತಿಳಿಸಿದರು.

ಸಾಮಾಜಿಕ ಅರಣ್ಯ, ಕೃಷಿ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಯಲ್ಲಿರುವ ಕಾಮಗಾರಿಗಳನ್ನು ಪರಿಶೀಲನೆ ಮಾಡಲಾಗುವುದು. ಗ್ರಾಮ ಪಂಚಾಯಿತಿಗಳಲ್ಲಿ ಸಂಬಂಧಿಸಿದ ಅಧಿಕಾರಿ ಸಿಬ್ಬಂದಿ ಸ್ಥಳದಲ್ಲಿ ಇರುವಂತೆ ಮೊದಲೇ ಸೂಚನೆ ನೀಡಬೇಕು ಎಂದರು.

ಜೆಜೆಎಂ, ಸಂಸದ ಆದರ್ಶ ಯೋಜನೆಯಡಿ ಅನುಷ್ಠಾನಗೊಂಡ ಕಾಮಗಾರಿಗಳನ್ನು ಸಹ ವಿಕ್ಷೀಸಲಾಗುವುದು ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಶರಣಬಸವರಾಜ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಜಯಪ್ರಕಾಶ, ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಾಣಧಿಕಾರಿ ಸುರೇಶಬಾಬು, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗ, ಗ್ರಾಮೀಣ ಕುಡಿಯುವ ನೀರು ವಿಭಾಗ, ಪಿಎಂಜಿಎಸ್ವೈ ಎಂಜಿನಿಯರ್, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಮಹಮ್ಮದ್ ಅಲಿ, ರೇಷ್ಮೆ ಇಲಾಖೆಯ ಉಪ ನಿರ್ದೇಶಕ, ಎಲ್ಲಾ ತಾಲ್ಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.