ಶನಿವಾರ, ಜೂನ್ 25, 2022
24 °C
ಕಾಳಾಪುರ: ₹4 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಭೂಮಿಪೂಜೆ

‘ಗ್ರಾಮಗಳ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಲಿಂಗಸುಗೂರು: ‘ಕ್ಷೇತ್ರದ ಜನರ ಆಶೀರ್ವಾದದಿಂದ ಶಾಸಕರಾಗಿ ಅಯ್ಕೆಗೊಂಡ ದಿನದಿಂದ ಈ ದಿನದವರೆಗೆ ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ ಜೊತೆಗೆ ಅತಿ ಹೆಚ್ಚು ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿರುವೆ’ ಎಂದು ಶಾಸಕ ಡಿ.ಎಸ್‍ ಹೂಲಗೇರಿ ಹೇಳಿದರು.

ಶನಿವಾರ ಕಾಳಾಪುರದಲ್ಲಿ ಐದನಾಳ ಕ್ರಾಸ್‍ದಿಂದ ಗುಂತಗೋಳ ಅಮರೇಶ್ವರ ರಸ್ತೆಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ‘2021-22ನೇ ಸಾಲಿನ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಯೋಜನೆಯಡಿ ₹4 ಕೋಟಿ ಅನುದಾನ ನೀಡಲಾಗಿದೆ. ಮುಖ್ಯ ರಸ್ತೆಯಿಂದ ತಾಂಡಾ, ದೊಡ್ಡಿಗಳಿಗೆ ಸಂಪರ್ಕಿಸುವ ರಸ್ತೆಗಳಿಗೆ ಹಂತ ಹಂತವಾಗಿ ಅನುದಾನ ನೀಡಲಾಗುವುದು. ಸಾರ್ವಜನಿಕರು ಸಹಕಾರ ನೀಡಿ ಗುಣಮಟ್ಟದ ಕಾಮಗಾರಿ ಮಾಡಿಸಿಕೊಳ್ಳಬೇಕು’ ಎಂದು ಮನವಿ ಮಾಡಿದರು.

ಪಿಕಾರ್ಡ್ ಬ್ಯಾಂಕ್‍ ಅಧ್ಯಕ್ಷ ಮಹಾಂತೇಶ ಪಾಟೀಲ, ಬ್ಲಾಕ್‍ ಕಾಂಗ್ರೆಸ್‍ ಅಧ್ಯಕ್ಷ ಭೂಪನಗೌಡ ಕರಡಕಲ್ಲ, ಮುಖಂಡರಾದ ಡಿ.ಜಿ ಗುರಿಕಾರ, ಕಾಳಾಪುರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಅಮರೇಶ ನಾಡಗೌಡ್ರ ಮಾತನಾಡಿ, ‘ಕ್ಷೇತ್ರದಾದ್ಯಂತ ಗ್ರಾಮೀಣ ಪ್ರದೇಶ ಸಂಪರ್ಕಿಸುವ ರಸ್ತೆಗಳ ಅಭಿವೃದ್ಧಿ ನಿರೀಕ್ಷೆಗೂ ಮೀರಿ ಅಭಿವೃದ್ಧಿಗೊಂಡಿವೆ. ನೂರಾರು ಕೋಟಿ ಅನುದಾನ ತರುವಲ್ಲಿ ಹೂಲಗೇರಿ ಪ್ರಯತ್ನ ಶ್ಲಾಘನೀಯ. ಇನ್ನು ಹೆಚ್ಚಿನ ಅನುದಾನ ತಂದು ಅಭಿವೃದ್ಧಿಗೆ ಮುಂದಾಗಬೇಕು’ ಎಂದರು.

ಗ್ರಾ.ಪಂ. ಮಾಜಿ ಅಧ್ಯಕ್ಷ ವಿಜಯಕುಮಾರ ಹೊಸಗೌಡ್ರ, ಮಾಜಿ ಉಪಾಧ್ಯಕ್ಷೆ ಮಾನಮ್ಮ ಅಮರಪ್ಪ, ಸದಸ್ಯರಾದ ನಾಗಪ್ಪ ಫೂಲಭಾವಿ, ಹುಲಗಪ್ಪ ಸಿಂಗೋಜಿ, ವಿರೇಶಸ್ವಾಮಿ, ಮೌನೇಶ ಐದನಾಳ. ಪುರಸಭೆ ಉಪಾಧ್ಯಕ್ಷ ಎಂ.ಡಿ ರಫಿ. ಮುಖಂಡರಾದ ಮಹಾಂತೇಶ, ಗುಂಡಪ್ಪ ನಾಯಕ, ಪರಶುರಾಮ ನಗನೂರ, ಗುಂಡಪ್ಪ ನಾಯಕ, ಲಾಲಪ್ಪ ರಾಠೋಡ, ವೆಂಕಟೇಶ ಗುತ್ತೆದಾರ, ಶಿವಪ್ಪ ಕೋಠ, ನಾಗರೆಡ್ಡಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.