ಕಾನೂನು ಇಲಾಖೆಯಲ್ಲಿ ನ್ಯಾ.ಸದಾಶಿವ ಆಯೋಗ ವರದಿ: ಪ್ರಿಯಾಂಕ್‌

7

ಕಾನೂನು ಇಲಾಖೆಯಲ್ಲಿ ನ್ಯಾ.ಸದಾಶಿವ ಆಯೋಗ ವರದಿ: ಪ್ರಿಯಾಂಕ್‌

Published:
Updated:

ರಾಯಚೂರು: ನ್ಯಾ. ಸದಾಶಿವ ಆಯೋಗದ ವರದಿಯನ್ನು ಕಾನೂನು ಇಲಾಖೆಯ ಪರಿಶೀಲನೆಗೆ ಕಳುಹಿಸಲಾಗಿದೆ. ಅಲ್ಲಿಂದ ಒಪ್ಪಿಗೆ ಬಂದ ನಂತರ ಜಾರಿಗೊಳಿಸುವ ಬಗ್ಗೆ ನಿರ್ಧರಿಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ ಖರ್ಗೆ ಹೇಳಿದರು.

ಶುಕ್ರವಾರ ವಟಗಲ್‌ನಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದರು.

ದಲಿತ ಪರ ಸಂಘಟನೆಗಳು ದೇಶದಾದ್ಯಂತ ನಡೆಸಿದ ಹೋರಾಟದಿಂದಾಗಿ ಕೇಂದ್ರ ಸರ್ಕಾರವು ಎಸ್‌ಸಿ–ಎಸ್‌ಟಿ ಕಾಯ್ದೆಯ ವಿಧೇಯಕ ಜಾರಿಗೆ ತಂದಿದೆ. ಬಡ್ತಿ ಮೀಸಲಾತಿ ಪ್ರಕರಣವು ಸುಪ್ರೀಂಕೋರ್ಟ್‌ನಲ್ಲಿದೆ. ವಿಶೇಷ ಘಟಕಗಳ ಯೋಜನೆಯಡಿ ರಾಜ್ಯದಲ್ಲಿ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಪ್ರತ್ಯೇಕ ರಾಜ್ಯ ಕೇಳಿದವರು ರಾಜ್ಯದ ಅಭಿವೃದ್ಧಿಗಾಗಿ ಬೆವರು ಸುರಿಸಿದವರಲ್ಲ. ಉತ್ತರ ಕರ್ನಾಟಕ ಮತ್ತು ಹೈದರಾಬಾದ್‌ ಕರ್ನಾಟಕದವರು ಕಷ್ಟಪಟ್ಟು ಒಂದಾಗಿದ್ದೇವೆ. ಪ್ರತ್ಯೇಕ ರಾಜ್ಯ ಬೇಡಿಕೆಯನ್ನು ಒಪ್ಪುವುದಿಲ್ಲ ಎಂದು ಹೇಳಿದರು.

ಎಚ್‌ಕೆಆರ್‌ಡಿಬಿ ಅನುದಾನ ಬಳಕೆಗೆ ಒತ್ತು ನೀಡಲಾಗಿದ್ದು, ಕಾಮಗಾರಿಗಳು ವಿಳಂಬವಾಗಿವೆ ಹೊರತು ಅನುದಾನ ಬಳಕೆಯಲ್ಲಿ ಹಿಂದೆ ಬಿದ್ದಿಲ್ಲ. ಮುಖ್ಯಮಂತ್ರಿ ₹49 ಸಾವಿರ ಕೋಟಿ ರೈತರ ಸಾಲ ಮನ್ನಾ ಮಾಡಲು ಬದ್ಧರಾಗಿದ್ದು, ಕುಮಾರಸ್ವಾಮಿ ಅವರ ಬಗ್ಗೆ ಏನೂ ಹೇಳಲ್ಲ. ಉತ್ತರ ಕರ್ನಾಟಕದ ಅಭಿವೃದ್ಧಿಯಲ್ಲಿ ಹಿನ್ನೆಡೆಯಾಗಿದ್ದರೂ, ಅಭಿವೃದ್ಧಿಯ ಕುರಿತು ಮಾತನಾಡಬೇಕು. ರಾಜ್ಯ ವಿಭಜನೆಯ ಮಾತುಗಳಾಡಬಾರದು ಎಂದರು.

ವಿಧಾನ ಪರಿಷತ್ ಸದಸ್ಯ ಬಸವರಾಜ ಪಾಟೀಲ ಇಟಗಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಮಣ್ಣ ಇರಬಗೇರಾ, ಕೆ.ಶಾಂತಪ್ಪ, ಜಿ.ಬಸವರಾಜರೆಡ್ಡಿ, ಶಿವಮೂರ್ತಿ, ರುದ್ರಪ್ಪ ಅಂಗಡಿ, ಅಮರೇಗೌಡ ಹಂಚಿನಾಳ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !